ಶುಕ್ರವಾರ, ಜನವರಿ 22, 2021
25 °C

ಬೆಂಗಳೂರು ಮಳೆ: ವಿದ್ಯುತ್ ತಂತಿ ತುಳಿದು ವ್ಯಕ್ತಿ ಸಾವು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಮಳೆಯಿಂದಾಗಿ ಉರುಳಿರುವ ವಿದ್ಯುತ್‌ ಕಂಬ–ಸಾಂದರ್ಭಿಕ ಚಿತ್ರ

ಬೆಂಗಳೂರು: ಮಳೆಯಿಂದ ತುಂಡಾಗಿ ಬಿದ್ದಿದ್ದ ವಿದ್ಯುತ್‌ ತಂತಿ ತುಳಿದು ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ತಿಲಕ್‌ನಗರದಲ್ಲಿ ಬುಧವಾರ ನಡೆದಿದೆ.

ನಗರದಲ್ಲಿ ಬುಧವಾರ ಸುರಿದ ಧಾರಾಕಾರ ಮಳೆಯಿಂದ ಇಲ್ಲಿನ ಸಾಗರ್ ಅಪೋಲೊ ಆಸ್ಪತ್ರೆ ಬಳಿ ಮರ ಉರುಳಿ, ವಿದ್ಯುತ್‌ ತಂತಿ ತುಂಡಾಗಿ ಬಿದ್ದಿತ್ತು. ಆಸ್ಪತ್ರೆಯೊಂದರಲ್ಲಿ ಡಿ ಗ್ರೂಪ್‌ ನೌಕರರಾಗಿದ್ದ ವೆಂಕಟೇಶ್‌ (41) ಎಂಬುವರು ಕೆಲಸ ಮುಗಿಸಿ ಮನೆಯತ್ತ ಹೊರಟಿದ್ದರು. ಕತ್ತಲಿನಲ್ಲಿ ಸಾಗುವಾಗ ತುಂಡಾಗಿದ್ದ ತಂತಿಯನ್ನು ವೆಂಕಟೇಶ್‌ ತುಳಿದಿದ್ದು, ವಿದ್ಯುತ್ ಪ್ರವಹಿಸಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ. 

ಮೃತದೇಹವನ್ನು ವಿಕ್ಟೊರಿಯಾ ಆಸ್ಪತ್ರೆಗೆ ರವಾನಿಸಲಾಗಿದ್ದು, ಈ ಸಂಬಂಧ ತಿಲಕ್‌ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. 

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು