ಶನಿವಾರ, 27 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಇನ್‌ಸ್ಪೆಕ್ಟರ್‌, ಎಸಿಪಿಗೆ ಕೊಲೆ ಬೆದರಿಕೆ ಪ್ರಕರಣ: ತನಿಖೆ ಸಿಸಿಬಿಗೆ ವರ್ಗ

Published 21 ಮೇ 2024, 21:30 IST
Last Updated 21 ಮೇ 2024, 21:30 IST
ಅಕ್ಷರ ಗಾತ್ರ

ಬೆಂಗಳೂರು:ಇನ್‌ಸ್ಪೆಕ್ಟರ್‌ ಹಾಗೂ ಎಸಿಪಿಗೆ ಕಾನ್‌ಸ್ಟೆಬಲ್‌ ಒಬ್ಬರು ಕೊಲೆ ಬೆದರಿಕೆ ಹಾಕಿದ್ದ ಪ್ರಕರಣದ ತನಿಖೆಯನ್ನು ನಗರ ಪೊಲೀಸರು ಕಮಿಷನರ್‌ ಬಿ.ದಯಾನಂದ ಅವರು ಸಿಸಿಬಿಗೆ ವರ್ಗಾವಣೆ ಮಾಡಿ ಆದೇಶಿಸಿದ್ದಾರೆ.

ಕರ್ತವ್ಯಲೋಪ ಎಸಗಿದ್ದ ಆರೋಪದಲ್ಲಿ ಅಮಾನತಿಗೆ ಶಿಫಾರಸು ಮಾಡಿದ ಇನ್‌ಸ್ಪೆಕ್ಟರ್ ಹಾಗೂ ಎಸಿಪಿಗೆ ಕಾನ್‌ಸ್ಟೆಬಲ್‌ ಒಬ್ಬರು ಚಾಕುವಿನಿಂದ ಇರಿದು ಕೊಲೆ ಮಾಡುವುದಾಗಿ ಬೆದರಿಕೆ ಹಾಕಿದ್ದರು.

ಬಾಣಸವಾಡಿ ಠಾಣೆ ವ್ಯಾಪ್ತಿಯಲ್ಲಿ ರೌಡಿಶೀಟರ್ ಕಾರ್ತಿಕೇಯನ್ ಎಂಬಾತನ ಹತ್ಯೆ ನಡೆದಿತ್ತು. ಹತ್ಯೆಗೆ ಹಳೇ ದ್ವೇಷವೇ ಕಾರಣ ಎಂಬುದು ತನಿಖೆಯಿಂದ ಗೊತ್ತಾಗಿತ್ತು. ಹತ್ಯೆಯಾದ ವ್ಯಕ್ತಿಗೂ, ಆರೋಪಿಗಳಿಗೂ ಹಳೇ ದ್ವೇಷವಿದೆ ಎಂಬ ಮಾಹಿತಿ ಠಾಣೆಯ ಕ್ರೈಂ ಸಿಬ್ಬಂದಿ ಮೊದಲೇ ಗೊತ್ತಿದ್ದರೂ, ಹಿರಿಯ ಅಧಿಕಾರಿಗಳ ಗಮನಕ್ಕೆ ತಂದಿರಲಿಲ್ಲ.

ಈ ಸಂಬಂಧ ಇನ್‌ಸ್ಪೆಕ್ಟರ್‌ ಹಾಗೂ ಎಸಿಪಿ ಶಿಫಾರಸಿನ ಮೇರೆಗೆ ಠಾಣೆಯ ನಾಲ್ವರು ಕಾನ್‌ಸ್ಟೆಬಲ್‌ಗಳನ್ನು ಪೂರ್ವ ವಿಭಾಗದ ಡಿಸಿಪಿ ಅಮಾನತು ‍ಪಡಿಸಿದ್ದರು. ಈ ವಿಚಾರ ತಿಳಿದ ಒಬ್ಬ ಕಾನ್‌ಸ್ಟೆಬಲ್, ಪಿಐ ಮತ್ತು ಎಸಿಪಿಗೆ ಕರೆ ಮಾಡಿ ಚಾಕುವಿನಿಂದ ಇರಿದು ಕೊಲೆ ಮಾಡುವುದಾಗಿ ಬೆದರಿಕೆ ಹಾಕಿದ್ದರು. ಅದರಿಂದ ವಿಚಲಿತಗೊಂಡ ಪಿಐ ಮತ್ತು ಎಸಿಪಿ ಶಿಫಾರಸು ಪತ್ರ ವಾಪಸ್ ಪಡೆದುಕೊಂಡಿದ್ದರು. ಅಲ್ಲದೇ, ಕಾನ್‌ಸ್ಟೆಬಲ್‌ನನ್ನು 1 ತಿಂಗಳ ಕಡ್ಡಾಯ ರಜೆ ಮೇಲೆ ಕಳುಹಿಸಲಾಗಿತ್ತು. ಇದೇ ಪ್ರಕರಣದ ತನಿಖೆಯನ್ನು ಸಿಸಿಬಿ ವರ್ಗಾವಣೆ ಮಾಡಲಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT