ಸೋಮವಾರ, ನವೆಂಬರ್ 18, 2019
25 °C

ಡಿ.11ಕ್ಕೆ ಕರಾಳ ದಿನಾಚರಣೆ

Published:
Updated:

ಬೆಂಗಳೂರು: ‘ದಲಿತರಿಗೆ ಒಳಮೀಸಲಾತಿ ಜಾರಿಗೊಳಿಸಬೇಕು’ ಎಂದು ಒತ್ತಾಯಿಸಿ ಮಾದಿಗ ಮೀಸಲಾತಿ ಹೋರಾಟ ಸಮಿತಿಯು 7ನೇ ವರ್ಷದ ಕರಾಳ ದಿನಾಚರಣೆಯನ್ನು ಡಿ.11ಕ್ಕೆ ಚಿಕ್ಕಬಳ್ಳಾಪುರದಲ್ಲಿ ಹಮ್ಮಿಕೊಂಡಿದೆ. 

‘ಪರಿಶಿಷ್ಟ ಜಾತಿಗಳಲ್ಲಿನ ಮೀಸಲಾತಿಯ ತಾರತಮ್ಯತೆ ನಿವಾರಣೆಗಾಗಿ ನ್ಯಾ.ಸದಾಶಿವ ನೇತೃತ್ವದಲ್ಲಿ ಆಯೋಗ ರಚನೆ ಮಾಡಲಾಗಿತ್ತು. ಈ ಬಗ್ಗೆ 2012ರಲ್ಲೇ ಸರ್ಕಾರಕ್ಕೆ ವರದಿ ಸಲ್ಲಿಸಿದ್ದರೂ, ಅದನ್ನು ಜಾರಿ ಮಾಡಲು ಸರ್ಕಾರಗಳು ಆಸಕ್ತಿ ತೋರಿಸಿಲ್ಲ’ ಎಂದು ಸಮಿತಿಯ ಕಾರ್ಯಾಧ್ಯಕ್ಷ ಬಿ.ಎ. ಕೇಶವಮೂರ್ತಿ ಬೇಸರ ವ್ಯಕ್ತಪಡಿಸಿದರು.

‘ಡಿಸೆಂಬರ್‌ನಲ್ಲಿ ರಾಜ್ಯದ 15 ವಿಧಾಸಭೆ ಕ್ಷೇತ್ರಗಳಲ್ಲಿ ಉಪ ಚುನಾವಣೆ ನಡೆಯಲಿದೆ. ಈ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಚುನಾವಣಾ ನೀತಿ ಸಂಹಿತೆ ಜಾರಿಯಾಗುವ ಮೊದಲೇ ಸದಾಶಿವ ವರದಿಯನ್ನು ಅಂಗೀಕರಿಸಿ, ಕೇಂದ್ರ ಸರ್ಕಾರಕ್ಕೆ ಶಿಫಾರಸು ಮಾಡುವ ಕುರಿತು ಅಭಿಪ್ರಾಯ ಸ್ವಷ್ಟಪಡಿಸಬೇಕು’ ಎಂದು ಎಚ್ಚರಿಸಿದರು.

ಪ್ರತಿಕ್ರಿಯಿಸಿ (+)