ಬೆಂಗಳೂರು:ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾ ಖೆಯ ರಾಜ್ಯ ವಿಕೇಂದ್ರೀಕರಣ ಯೋಜನೆ ಮತ್ತು ಅಭಿವೃದ್ಧಿ ಸಮಿತಿ ಉಪಾಧ್ಯಕ್ಷರನ್ನಾಗಿ ಉತ್ತರಕನ್ನಡ ಜಿಲ್ಲೆ ಯಲ್ಲಾಪುರದ ಪ್ರಮೋದ್ ಹೆಗಡೆ ಅವರನ್ನು ರಾಜ್ಯ ಸರ್ಕಾರ ನೇಮಿಸಿದೆ.

ಸಾಮಾಜಿಕ ಮತ್ತು ಆರ್ಥಿಕ ಅಭಿವೃದ್ಧಿ ಕ್ಷೇತ್ರದಲ್ಲಿ ತಜ್ಞರಾದ ಸರ್ಕಾರೇತರ ಸದಸ್ಯರ ಆಯ್ಕೆಯ ಕೋಟಾದಲ್ಲಿ ಇವರನ್ನು ನೇಮಕ ಮಾಡಲಾಗಿದೆ. ಈ ಸಮಿತಿಗೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅಧ್ಯಕ್ಷರಾಗಿದ್ದು, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಕೆ.ಎಸ್.ಈಶ್ವರಪ್ಪ ಮತ್ತು ನಗರಾಭಿವೃದ್ಧಿ ಸಚಿವ ಭೈರತಿ ಬಸವರಾಜ್ ಅವರೂ ಉಪಾಧ್ಯಕ್ಷರಾಗಿದ್ದಾರೆ. ಪ್ರಮೋದ್ ಹೆಗಡೆಯವರು ವಿಕೇಂದ್ರೀಕರಣ ಕ್ಷೇತ್ರದಲ್ಲಿ ನೀಡಿರುವ ಕೊಡುಗೆ ಪರಿಗಣಿಸಿ ನೇಮಕ ಮಾಡಲಾಗಿದೆ. ಹಿಂದೆ ಇವರು ಉತ್ತರ ಕನ್ನಡ ಜಿಲ್ಲಾ ಪಂಚಾಯ್ತಿಯ ಉಪಾಧ್ಯಕ್ಷರಾಗಿಯೂ ಕಾರ್ಯನಿರ್ವಹಿಸಿದ್ದರು. ರಾಜ್ಯ ಅಭಿ ವೃದ್ಧಿ ಯೋಜನೆಗಳನ್ನು ರೂಪಿಸಲು ಈ ಸಮಿತಿಯನ್ನು ಪುನರ್ ರಚಿಸಲಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.