ಗುರುವಾರ , ನವೆಂಬರ್ 26, 2020
22 °C

‘ಕೋವಿಡ್ ಇಳಿಕೆ; ನಿರ್ಲಕ್ಷ್ಯ ಸಲ್ಲದು’

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಬೊಮ್ಮನಹಳ್ಳಿ: ‘ಕೋವಿಡ್ ಸೋಂಕಿತರ ಸಂಖ್ಯೆಯಲ್ಲಿ ಇಳಿಮುಖವಾಗುತ್ತಿರುವುದು ಆಶಾದಾಯಕವಾದರೂ, ಮೈಮರೆಯದೇ ಹೆಚ್ಚು ಪರೀಕ್ಷೆ ಮಾಡುವತ್ತ ಗಮನ ನೀಡಬೇಕು’ ಎಂದು ಬೊಮ್ಮನಹಳ್ಳಿ ವಲಯದ ಕೋವಿಡ್ ಉಸ್ತುವಾರಿ ಮಣಿವಣ್ಣನ್ ಅಧಿಕಾರಿಗಳಿಗೆ ತಾಕೀತು ಮಾಡಿದರು.

ಬಿಬಿಎಂಪಿ ಬೊಮ್ಮನಹಳ್ಳಿ ವಲಯ ಕಚೇರಿಯಲ್ಲಿ ಗುರುವಾರ ನಡೆದ ಸಭೆಯಲ್ಲಿ, ಕೋವಿಡ್ ಕಾರ್ಯಾಚರಣೆಯ ಪ್ರಗತಿ ಕಾರ್ಯದ ಪರಿಶೀಲನೆ ನಡೆಸಿ ಮಾತನಾಡಿದರು.

‘ಪ್ರತಿ ದಿನ ಐದು ಸಾವಿರದಿಂದ ಆರು ಸಾವಿರ ಪರೀಕ್ಷೆಗಳನ್ನು ನಡೆಸಲೇಬೇಕು. ಸಾರ್ವಜನಿಕ ಸ್ಥಳಗಳು, ಸಂತೆ, ಕೈಗಾರಿಕೆಗಳು ಹಾಗೂ ವಸತಿ ಸಂಕೀರ್ಣಗಳ ಬಳಿ ಕ್ಯಾಂಪ್ ಹಾಕಿ ಎಲ್ಲರನ್ನೂ ಪರೀಕ್ಷೆಗೊಳಪಡಿಸಬೇಕು’ ಎಂದರು.

‘ಮಾಸ್ಕ್ ಹಾಕದೇ ಓಡಾಡುವವರಿಗೆ ದಂಡ ವಿಧಿಸುವುದರ ಜತೆಗೆ ಕೋವಿಡ್ ಪರೀಕ್ಷೆಗೊಳಪಡಿಸಬೇಕು’ ಎಂದರು.

‘ಸಾರ್ವಜನಿಕರು ಪರಸ್ಪರ ಅಂತರ ಕಾಯ್ದುಕೊಳ್ಳುವುದು ಹಾಗು ಮಾಸ್ಕ್ ಧರಿಸುವುದನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸಬೇಕು, ಈ ಕೆಲಸಗಳಲ್ಲಿ ಉದಾಸೀನ ಮಾಡಿದ ಅಧಿಕಾರಿಗಳನ್ನು ಮುಲಾಜಿಲ್ಲದೆ ಅಮಾನತು ಮಾಡಲಾಗು ವುದು’ ಎಂದು ಎಚ್ಚರಿಸಿದರು.

ಸಭೆಯಲ್ಲಿ ಜಂಟಿ ಆಯುಕ್ತ ಎಂ.ರಾಮಕೃಷ್ಣ, ಆರೋಗ್ಯಾಧಿಕಾರಿ ಡಾ.ನಾರಾಯಣಸ್ವಾಮಿ ಹಾಗೂ ಡಾ. ನಾಗೇಂದ್ರ ಇದ್ದರು.

 

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.