ಬೆಂಗಳೂರು: ‘ಬೆಳಕಿನ ಹಬ್ಬ’ ದೀಪಾವಳಿ ವೇಳೆ ರಾಜಧಾನಿಯಲ್ಲಿ ಪಟಾಕಿ ಸಿಡಿತದಿಂದ ಅವಘಡಗಳು ಸಂಭವಿಸುತ್ತಿವೆ.
ಪಟಾಕಿ ಸ್ಫೋಟದಿಂದ ಗಾಯಗೊಂಡ 7 ಮಂದಿ ರಾಜಾಜಿನಗರದ ನಾರಾಯಣ ನೇತ್ರಾಲಯದಲ್ಲಿ ಹಾಗೂ ಐವರು ಮಿಂಟೋ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ನೇತ್ರಾಲಯದಲ್ಲಿ ಏಳು ಮಂದಿ ಚಿಕಿತ್ಸೆಗೆ ಬಂದಿದ್ದರು. ಮೂವರನ್ನು ಆಸ್ಪತ್ರೆಯಲ್ಲಿ ದಾಖಲಿಸಿಕೊಳ್ಳಲಾಗಿದೆ. ಇಬ್ಬರಿಗೆ ಚಿಕಿತ್ಸೆ ನೀಡಿ ಮನೆಗೆ ಕಳುಹಿಸಲಾಗಿದೆ. ಮತ್ತೊಬ್ಬರು ಗಂಭೀರವಾಗಿ ಗಾಯಗೊಂಡಿದ್ದು, ಚಿಕಿತ್ಸೆ ಮುಂದುವರಿಸಲಾಗಿದೆ ಎಂದು ಆಸ್ಪತ್ರೆಯ ಮೂಲಗಳು ತಿಳಿಸಿವೆ.
ಕಣ್ಣಿಗೆ ಗಾಯವಾಗಿರುವ ಶ್ರೀನಗರದ ಮದನ್ (18) ಅವರಿಗೆ ಮಿಂಟೋ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಫ್ರೇಜರ್ ಟೌನ್‌ನ ಆದಿತ್ಯ (7) ಹಾಗೂ ಥಣಿಸಂದ್ರದ ಸ್ಯಾಮ್ಯುವಲ್ (7) ಅವರಿಗೂ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಮೂಲಗಳು ತಿಳಿಸಿವೆ.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.