ಭಾನುವಾರ, 5 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ದೀಪಾವಳಿ ಸಡಗರ: ಬೆಂಗಳೂರು ನಗರದಲ್ಲಿ ಬೆಳಕಿನ ಲೋಕ

Published 13 ನವೆಂಬರ್ 2023, 15:47 IST
Last Updated 13 ನವೆಂಬರ್ 2023, 15:47 IST
ಅಕ್ಷರ ಗಾತ್ರ

ಬೆಂಗಳೂರು: ಬೆಳಕಿನ ಹಬ್ಬ ದೀಪಾವಳಿಯ ನಿಮಿತ್ತ ಮನೆ ಹಾಗೂ ಅಂಗಡಿಗಳಲ್ಲಿ ಲಕ್ಷ್ಮಿ ಪೂಜೆ ನೆರವೇರಿಸಿದರು.

ಸಿಲಿಕಾನ್ ಸಿಟಿಯ ಜನರಲ್ಲಿ ಹಬ್ಬದ ಸಂಭ್ರಮ ಮನೆ ಮಾಡಿತ್ತು. ನಗರದ ಅಂಗಡಿಗಳಲ್ಲಿ ಬೆಳಿಗ್ಗೆಯೇ ಪೂಜಾ ಕಾರ್ಯಕ್ರಮ ನೆರವೇರಿಸಲಾಯಿತು. ವರ್ಷವಿಡೀ ವ್ಯಾಪಾರ, ವಹಿವಾಟು ಚೆನ್ನಾಗಿ ನಡೆಯಲಿ ಎಂದು ವ್ಯಾಪಾರಿಗಳು ಲಕ್ಷ್ಮೀದೇವರಲ್ಲಿ ಪ್ರಾರ್ಥಿಸಿದರು. ಸಂಜೆ ಮನೆ– ದೇಗುಲಗಳ ಮುಂದೆ ಸಾಲು ದೀಪಗಳು ಬೆಳೆಗಿದವು.

ಖರೀದಿ ಭರಾಟೆ:

ನಗರದ ಪ್ರಮುಖ ಮಾರುಕಟ್ಟೆಗಳಲ್ಲಿ ದಿನಸಿ, ತರಕಾರಿ, ಕಬ್ಬು, ಹೂವು– ಹಣ್ಣುಗಳ, ಬಟ್ಟೆ ಖರೀದಿಯ ಭರಾಟೆ ಜೋರಾಗಿತ್ತು. ಆಲಂಕಾರಿಕ ವಸ್ತುಗಳು, ಹಣತೆ ಮತ್ತು ಆಕಾಶಬುಟ್ಟಿಗಳ ಖರೀದಿ ಸಾಮಾನ್ಯವಾಗಿತ್ತು. ಜನ ಪಟಾಕಿ ಖರೀದಿಸಿದರು.

ಹಬ್ಬದ ಅಂಗವಾಗಿ ಪ್ರಮುಖ ಅಂಗಡಿಗಳು ಗ್ರಾಹಕರನ್ನು ಸೆಳೆಯಲು ಹಲವು ರಿಯಾಯಿತಿಗಳನ್ನು ಘೋಷಿಸಿದ್ದವು. ಬಂಗಾರದ ಅಂಗಡಿ, ಬಟ್ಟೆ ಅಂಗಡಿ, ಎಲೆಕ್ಟ್ರಾನಿಕ್‌ ಉಪಕರಣಗಳ ಮಳಿಗೆಗಳು ಹಾಗೂ ಸಿಹಿ ತಿನಿಸುಗಳ ಮಳಿಗೆಗಳು ಗ್ರಾಹಕರಿಂದ ತುಂಬಿದ್ದವು.

ನಗರದ ಜವಳಿ ಅಂಗಡಿಯೊಂದರಲ್ಲಿ ಮಹಿಳೆಯರು ದೀಪಗಳನ್ನು ಬೆಳಗಿದರು. ಪ್ರ

ನಗರದ ಜವಳಿ ಅಂಗಡಿಯೊಂದರಲ್ಲಿ ಮಹಿಳೆಯರು ದೀಪಗಳನ್ನು ಬೆಳಗಿದರು. ಪ್ರ

ಜಾವಾಣಿ ಚಿತ್ರ

ಸಂಜೆ ನಂತರ ಮನೆ, ಮನೆಗಳಲ್ಲಿ ಕಂಗೊಳಿಸಿದ ದೀಪಗಳು ಬೆಳಕಿನ ರಂಗಿನ ಲೋಕವನ್ನು ಸೃಷ್ಟಿಸಿದವು.‌ ಹೊಸ್ತಿಲು, ಕಿಟಕಿ, ಕಾಂಪೌಂಡ್‌ ಮೇಲೆಯೂ ವಿವಿಧ ವಿನ್ಯಾಸದ ದೀಪಗಳನ್ನು ಹಚ್ಚಿ, ಅವುಗಳಿಗೆ ಹೂವಿನ ಅಲಂಕಾರ ಮಾಡಿ ಸಂಭ್ರಮಿಸಿದರು.

ದೇವಾಲಯಗಳಲ್ಲಿ ವಿಶೇಷ ಪೂಜೆಗಳು ನಡೆದವು. ಸೋಮವಾರ ಸಂಜೆಯ ಪಟಾಕಿ ಸದ್ದು ಕೂಡ ಜೋರಾಗಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT