ಗುರುವಾರ , ಡಿಸೆಂಬರ್ 3, 2020
24 °C

ಬೆಂಗಳೂರಿನಲ್ಲಿ ಪಟಾಕಿ ಅವಘಡ: 14 ಮಕ್ಕಳಿಗೆ ಗಾಯ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ನಗರದಲ್ಲಿ ಕಳೆದ ಎರಡು ದಿನಗಳಲ್ಲಿ 14 ಮಕ್ಕಳು ಸೇರಿ 15 ಜನ ಗಾಯಗೊಂಡಿದ್ದಾರೆ.

ಅದರಲ್ಲಿಯೂ, ನಗರದ 12 ವರ್ಷದ ಬಾಲಕಿಯ ಮುಖ, ಕೈ ಹಾಗೂ ಕಣ್ಣುಗಳಿಗೆ ತೀವ್ರ ಹಾನಿಯಾಗಿದ್ದು, ಪ್ಲಾಸ್ಟಿಕ್ ಸರ್ಜರಿಗೆ ವೈದ್ಯರು ಸೂಚಿಸಿದ್ದಾರೆ.

ಭಾನುವಾರ ರಾತ್ರಿ ಪಟಾಕಿ ಸಿಡಿಸುವ ಸಂದರ್ಭದಲ್ಲಿ ಏಕಾಏಕಿ ಹೂಕುಂಡ ಸಿಡಿದು ಬಾಲಕಿಯ ಬಹುತೇಕ ಮುಖ ಸುಟ್ಟಿದ್ದು, ಕೈಗೆ ತೀವ್ರ ಗಾಯವಾಗಿದೆ. ಜತೆಗೆ ಕಣ್ಣಿಗೂ ಶೇ.50 ರಷ್ಟು ಹಾನಿಯಾಗಿದೆ.‌ ಬಾಲಕಿಯನ್ನು ಕೂಡಲೇ ನಗರದ ಮಿಂಟೋ ಕಣ್ಣಿನ ಆಸ್ಪತ್ರೆಗೆ ಕರೆತರಲಾಗಿದೆ. 

ಪ್ರಾಥಮಿಕ ತಪಾಸಣೆ ನಡಿಸಿದ ವೈದ್ಯರು ಕೈ ಮತ್ತು ಕಣ್ಣಿಗೆ ತ್ವರಿತ ಚಿಕಿತ್ಸೆ ನೀಡಿ, ಸಂಪೂರ್ಣ ಮುಖಕ್ಕೆ ಪ್ಲಾಸ್ಟಿಕ್ ಸರ್ಜರಿ ಮಾಡಬೇಕು ಎಂದು ತಿಳಿಸಿದ್ದಾರೆ. ಈಗ, ಬಾಲಕಿಯನ್ನು ವಿಕ್ಟೋರಿಯಾ ಆಸ್ಪತ್ರೆಯ ಸುಟ್ಟ ಗಾಯಗಳ ವಿಭಾಗಕ್ಕೆ ವರ್ಗಾಯಿಸಲಾಗಿದೆ.

ಸರ್ಕಾರದ ಸೂಚನೆಯಂತೆ ಶಸ್ತ್ರಚಿಕಿತ್ಸೆ ಮಾಡುವ ಸಂದರ್ಭದಲ್ಲಿ ಕೋವಿಡ್ ಪರೀಕ್ಷೆಯನ್ನು ಕಡ್ಡಾಯವಾಗಿ ಮಾಡಬೇಕಿದೆ. ಸದ್ಯ ಬಾಲಕಿಯ ಗಂಟಲು ದ್ರವ ಮಾದರಿ ತೆಗೆದು ಆರ್ ಟಿಪಿಸಿಆರ್ ಪರೀಕ್ಷೆಗೆ ಕಳಿಸಿದ್ದು, ವರದಿಗಾಗಿ ವೈದ್ಯರು ಕಾಯುತ್ತಿದ್ದಾರೆ. 

ಇದಲ್ಲದೆ, ತಡರಾತ್ರಿ ಪಟಾಕಿ ಹಾನಿಗೊಳಗಾಗಿ ಮಿಂಟೋ ಆಸ್ಪತ್ರೆಯಲ್ಲಿಯೇ ಇಬ್ಬರು ಮಕ್ಕಳು, ನಾರಾಯಣ ನೇತ್ರಾಲಯದಲ್ಲಿ 40 ವರ್ಷದ ಮಹಿಳೆ  ಚಿಕಿತ್ಸೆ ಪಡೆದಿದ್ದಾರೆ.

ಹಬ್ಬದ ಮೊದಲ ದಿನ ಎರಡು ಮತ್ತು ಎರಡನೇ ದಿನ 13 ಪ್ರಕರಣಗಳು ವರದಿಯಾಗಿವೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು