ಶುಕ್ರವಾರ, ನವೆಂಬರ್ 27, 2020
19 °C

ಹಬ್ಬಕ್ಕೆ ಹೊರಟ ಜನ; ದಟ್ಟಣೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ನಗರದಲ್ಲಿ ಶುಕ್ರವಾರ ಕಂಡ ಸಂಚಾರ ದಟ್ಟಣೆ

ಬೆಂಗಳೂರು: ನಗರದಲ್ಲಿ ನೆಲೆಸಿರುವ ಬೇರ ಊರಿನ ಜನರು, ದೀಪಾವಳಿ ಹಬ್ಬ ಆಚರಣೆಗಾಗಿ ಶುಕ್ರವಾರ ರಾತ್ರಿಯೇ ತಮ್ಮೂರಿನತ್ತ ಹೊರಟರು. ಸಾರಿಗೆ ನಿಗಮ ಬಸ್, ಖಾಸಗಿ ಬಸ್ ಹಾಗೂ ಖಾಸಗಿ ವಾಹನಗಳ ಸಂಚಾರ ಹೆಚ್ಚಿದ್ದರಿಂದ ಹಲವೆಡೆ ಸಂಚಾರ ದಟ್ಟಣೆ ಕಂಡುಬಂತು.

ಶನಿವಾರದಿಂದ ಸರಣಿ ರಜೆ ಇರುವುದರಿಂದ ಹಬ್ಬಕ್ಕೂ ಮುನ್ನಾದಿನವೇ ಬಹುತೇಕ ಜನ ಊರಿನತ್ತ ತೆರಳಿದರು. ಸಂಜೆಯಿಂದಲೇ ಮೆಜೆಸ್ಟಿಕ್‌ ಬಸ್‌ ನಿಲ್ದಾಣಗಳತ್ತ ಬರಲಾರಂಭಿಸಿದ್ದರು. ಲಗೇಜು ಸಮೇತ ಗುಂಪು ಗುಂಪಾಗಿ ನಿಂತಿದ್ದು ಕಂಡುಬಂತು. 

ನಗರದ ಬೇರೆ ಬೇರೆ ಪ್ರದೇಶಗಳಿಂದ ಜನ ವಾಹನಗಳಲ್ಲಿ ಮೆಜೆಸ್ಟಿಕ್‌ಗೆ ಬಂದಿದ್ದರು. ವಾಹನಗಳ ಸಂಖ್ಯೆ ಹೆಚ್ಚಾಗಿ ದಟ್ಟಣೆ ಉಂಟಾಯಿತು. ನಗರದಿಂದ ಬೇರೆ ಊರುಗಳಿಗೆ ಹೊರಟಿದ್ದ ಬಸ್‌ಗಳು ದಟ್ಟಣೆಯಲ್ಲಿ ಸಿಲುಕಿದ್ದವು. 

ಚಾಲುಕ್ಯ ವೃತ್ತ, ಆನಂದರಾವ್‌ ವೃತ್ತ, ಮೈಸೂರು ರಸ್ತೆ, ಯಶವಂತಪುರ, ಆರ್‌ಎಂಸಿ ಯಾರ್ಡ್‌, ತುಮಕೂರು ರಸ್ತೆ, ಹೊಸೂರು ರಸ್ತೆಗಳಲ್ಲಿ ವಾಹನಗಳ ದಟ್ಟಣೆ ಇತ್ತು. 

ಲಾಕ್‌ಡೌನ್ ತೆರವಾದ ನಂತರ ಖಾಸಗಿ ಬಸ್‌ಗಳ ಓಡಾಟ ಆರಂಭವಾಗಿದ್ದು, ನಿಗದಿಯಷ್ಟು ಬಸ್ ಸಂಚರಿಸುತ್ತಿಲ್ಲ. ಕೆಎಸ್‌ಆರ್‌ಟಿಸಿಯಿಂದ 1 ಸಾವಿರ ಹೆಚ್ಚುವರಿ ಬಸ್‌ಗಳ ವ್ಯವಸ್ಥೆ ಮಾಡಲಾಗಿದೆ. ಹುಬ್ಬಳ್ಳಿ–ಧಾರವಾಡ, ಬೆಳಗಾವಿ, ಬೀದರ್, ರಾಯಚೂರು, ಕೊಪ್ಪಳ, ಬಳ್ಳಾರಿ, ಕಲಬುರ್ಗಿ ಹಾಗೂ ಇತರೆ ನಗರಗಳಿಗೆ ಹೋಗುವವರ ಸಂಖ್ಯೆಯೇ ಹೆಚ್ಚಿತ್ತು.

ನೆಲಮಂಗಲ, ದೇವನಹಳ್ಳಿ, ಎಲೆಕ್ಟ್ರಾನಿಕ್ ಸಿಟಿ ಟೋಲ್‌ನಲ್ಲಿ ವಾಹನಗಳು ಸಾಲುಗಟ್ಟಿ ನಿಂತಿದ್ದವು. ಇದರಿಂದಾಗಿ ಪ್ರಯಾಣಿಕರು ನಗರ ದಾಟಲು ಸಾಕಷ್ಟು ಸಮಯ ಬೇಕಾಯಿತು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು