ಶುಕ್ರವಾರ, 13 ಸೆಪ್ಟೆಂಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ಸಿರಿಗೆರೆ ಶ್ರೀ ವಿರುದ್ಧ ಮಾನನಷ್ಟ ಮೊಕದ್ದಮೆ: ಬಿ.ಸಿ. ಪಾಟೀಲ

Published : 8 ಆಗಸ್ಟ್ 2024, 16:04 IST
Last Updated : 8 ಆಗಸ್ಟ್ 2024, 16:04 IST
ಫಾಲೋ ಮಾಡಿ
Comments

ಬೆಂಗಳೂರು: ‘ಸಿರಿಗೆರೆ ಬೃಹನ್ಮಠದ ಶಿವಮೂರ್ತಿ ಶಿವಾಚಾರ್ಯ ಸ್ವಾಮೀಜಿ ಅವರು ಏಕವ್ಯಕ್ತಿ ಹೆಸರಿನಲ್ಲಿರುವ ಟ್ರಸ್ಟ್‌ ರಚಿಸಿಕೊಂಡು ಸರ್ವಾಧಿಕಾರಿಯಂತೆ ಎಲ್ಲ ನಿರ್ಧಾರಗಳನ್ನು ತೆಗೆದುಕೊಳ್ಳುತ್ತಿದ್ದಾರೆ. ಮಠದ ಭಕ್ತರನ್ನು ಕುಡುಕರೆಂದು ನಿಂದಿಸಿರುವ ಸ್ವಾಮೀಜಿ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡಲು ಭಕ್ತರು ನಿರ್ಧರಿಸಿದ್ದಾರೆ’ ಎಂದು ಮಾಜಿ ಸಚಿವ ಬಿ.ಸಿ. ಪಾಟೀಲ ತಿಳಿಸಿದರು.

ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಶ್ರೀಮದುಜ್ಜಯಿನಿ ಸದ್ಧರ್ಮ ಸಿಂಹಾಸನ ಶ್ರೀಮಠ ಪಾಲ್ಕುರಿಕೆ–ಸಿರಿಗೆರೆ ಶ್ರೀತರಳಬಾಳು ಜಗದ್ಗುರು ಬೃಹನ್ಮಠ’ ಎಂಬ ಹೆಸರಿತ್ತು. ಆದರೆ, ಈಗಿನ ಪೀಠಾಧಿಪತಿಗಳಾಗಿರುವ ಶಿವಮೂರ್ತಿ ಶಿವಾಚಾರ್ಯ ಸ್ವಾಮೀಜಿ ಅವರು ಶ್ರೀಮದುಜ್ಜಯಿನಿ ಸದ್ಧರ್ಮ ಸಿಂಹಾಸನ ಶ್ರೀ ತರಳಬಾಳು ಜಗದ್ಗುರು ಬೃಹನ್ಮಠ ಎಂದು ಬದಲಿಸಿಕೊಂಡಿದ್ದಾರೆ. 1990ರಲ್ಲಿ ಏಕಮಾತ್ರ ಟ್ರಸ್ಟಿಯ ಟ್ರಸ್ಟ್‌ ರಚಿಸಿಕೊಂಡು ಮಠದ ಆಸ್ತಿ ವರ್ಗಾವಣೆ ಮಾಡಿಕೊಂಡಿದ್ದಾರೆ. ಟ್ರಸ್ಟ್‌ನ ಬೈ–ಲಾವನ್ನು ಕಡೆಗಣಿಸಿ ಎಲ್ಲ ರೀತಿಯ ನಿರ್ಧಾರಗಳನ್ನು ಕೈಗೊಳ್ಳುತ್ತಿದ್ದಾರೆ ಎಂದು ದೂರಿದರು.

‘60 ವರ್ಷಕ್ಕೆ ಶಿವಾಚಾರ್ಯ ಸ್ವಾಮೀಜಿಯವರು ಪೀಠ ತ್ಯಾಗ ಮಾಡಬೇಕಿತ್ತು. 78 ವರ್ಷಗಳಾಗಿರುವ ಶಿವಮೂರ್ತಿ ಸ್ವಾಮೀಜಿ ಪೀಠ ತ್ಯಾಗ ಮಾಡದೇ ಸರ್ವಾಧಿಕಾರಿ ಧೋರಣೆ ಅನುಸರಿಸುತ್ತಿದ್ಧಾರೆ. ಮಠದ ಭಕ್ತರನ್ನು ಒಡೆದು ಎರಡು ಗುಂಪುಗಳನ್ನಾಗಿ ಮಾಡುತ್ತಿದ್ದಾರೆ’ ಎಂದು ಆರೋಪಿಸಿದರು.

‘ಬೈ–ಲಾ ಪ್ರಕಾರ ಚುನಾವಣೆಯ ಮೂಲಕ ಸಂಘದ ಸಮಿತಿ ರಚಿಸಬೇಕು. ಆದರೆ, ಸ್ವಾಮೀಜಿ ತಮಗೆ ಬೇಕಾದವರನ್ನು ಅಧ್ಯಕ್ಷರನ್ನಾಗಿ, ಗುರುಗಳನ್ನಾಗಿ ನೇಮಿಸುತ್ತಿದ್ದಾರೆ. 30 ವರ್ಷಗಳಿಂದ ಸಂಘದ ಸದಸ್ಯತ್ವ ನೋಂದಣಿ ಮಾಡಿಲ್ಲ. ಇದನ್ನು ಖಂಡಿಸಿ ಆಗಸ್ಟ್ 4ರಂದು ಶಾಮನೂರು ಶಿವಶಂಕರಪ್ಪ ಅವರ ಅಧ್ಯಕ್ಷತೆಯಲ್ಲಿ ಸಭೆ ಮಾಡಿದ ಭಕ್ತರನ್ನು ಕುಡುಕರು ಎಂದು ನಿಂದಿಸಿದ್ದಾರೆ’ ಎಂದರು.

ಸುದ್ದಿಗೋಷ್ಠಿಯಲ್ಲಿ ಹೋಟೆಲ್ ಉದ್ಯಮಿ ಅಣಬೇರು ರಾಜಣ್ಣ, ಮಠದ ಭಕ್ತರಾದ ಲಿಂಗರಾಜು, ಷಣ್ಮುಖಪ್ಪ, ಉಮೇಶ್ ಬಣಕಾರ್, ಗುರುಸ್ವಾಮಿ, ಬಿ.ಸಿ.ರಾಜಪ್ಪ, ಶಿವಕುಮಾರಸ್ವಾಮಿ ಭಾಗವಹಿಸಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT