ಮಾನನಷ್ಟ ಮೊಕದ್ದಮೆ: ನ್ಯಾಯಾಲಯಕ್ಕೆ ಹಾಜರಾದ ಸಂಸದ ನಳಿನ್ ಕುಮಾರ್ ಕಟೀಲ್

ಬೆಂಗಳೂರು: ಮಾನನಷ್ಟ ಮೊಕದ್ದಮೆ ಪ್ರಕರಣದಲ್ಲಿ ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ, ಸಂಸದ ನಳಿನ್ ಕುಮಾರ್ ಕಟೀಲ್ ನಗರದ ಸಿಟಿ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯಕ್ಕೆ ಹಾಜರಾಗಿ ಜಾಮೀನು ಪಡೆದುಕೊಂಡಿದ್ದಾರೆ.
ಲೋಕಸಭಾ ಚುನಾವಣೆಯ ವೇಳೆ ‘ಕರ್ನಾಟಕ ಬಿಜೆಪಿ’ ಟ್ವಿಟರ್ ಖಾತೆಯಿಂದ ರಿಜ್ವಾನ್ ಅರ್ಷದ್ ಬಗ್ಗೆ ಅವಹೇಳನಕಾರಿಯಾಗಿ ಟ್ವೀಟ್ ಮಾಡಲಾಗಿತ್ತು. ಇದನ್ನು ಪ್ರಶ್ನಿಸಿ ರಿಜ್ವಾನ್ ಅರ್ಷದ್ ಮಾನನಷ್ಟ ಮೊಕದ್ದಮೆ ಹೂಡಿದ್ದರು.
ಈ ಬಗ್ಗೆ ಸಮನ್ಸ್ ಹೊರಡಿಸಿದ ನ್ಯಾಯಾಲಯ, ವಿಚಾರಣೆಗೆ ಹಾಜರಾಗುವಂತೆ ಕಟೀಲ್ ಅವರಿಗೆ ಸೋಮವಾರ ಆದೇಶಿಸಿತ್ತು. ಆದರೆ, ಅಂದು ಕಟೀಲ್ ಹಾಜರಾಗಿರಲ್ಲಿಲ್ಲ. ಅಂದು ಸಂಜೆಯ ಒಳಗೆ ಹಾಜರಾಗದೆ ಇದ್ದರೆ ವಾರೆಂಟ್ ಹೊರಡಿಸಲಾಗುವುದು ಎಂದು ಕೋರ್ಟ್ ಎಚ್ಚರಿಸಿತ್ತು.
ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.