ಬೆಂಗಳೂರು: ‘ಬಿ.ಎಸ್ಸಿ ಅಗ್ರಿಕಲ್ಚರ್ ಹಾಗೂ ಬಿ.ಟೆಕ್ ಎಂಜಿನಿಯರಿಂಗ್ ಸೇರಿದಂತೆ ಕೃಷಿ ವಿಶ್ವವಿದ್ಯಾಲಯದ ಎಲ್ಲಾ ಪದವಿ ಪರೀಕ್ಷೆಗಳು ಇದೇ 8ರಂದು ಆನ್ಲೈನ್ ಮೂಲಕ ಮುಕ್ತಾಯಗೊಂಡಿವೆ. ಈ ತಿಂಗಳಾಂತ್ಯದ ವೇಳೆಗೆ ಅಂಕಪಟ್ಟಿ ಮತ್ತು ಪದವಿ ಪ್ರಮಾಣಪತ್ರ ನೀಡಲಾಗುವುದು’ ಎಂದು ಕೃಷಿ ಸಚಿವ ಬಿ.ಸಿ.ಪಾಟೀಲ ಹೇಳಿದರು.

ಶನಿವಾರ ಸುದ್ದಿಗೋಷ್ಠಿಯಲ್ಲಿ ಅವರು, ಇದೇ 15ರೊಳಗೆ ಗ್ರೇಡ್ ಅಂತಿಮಗೊಳಿಸಿ ಪರೀಕ್ಷಾ ಘಟಕಕ್ಕೆ ಸಲ್ಲಿಸಬೇಕಿದ್ದು, ಸಂಭಾವ್ಯ ಪದವಿ ಪ್ರಮಾಣಪತ್ರ ಮತ್ತು ಅಂಕಪಟ್ಟಿ ಸಲ್ಲಿಕೆ 15ರ ಬಳಿಕ ಆರಂಭವಾಗಲಿದೆ’ ಎಂದು ಹೇಳಿದರು.

‘ಅಂತಿಮ ವರ್ಷದ ಎಂಎಸ್ಸಿ ಹಾಗೂ ಪಿಎಚ್.ಡಿ ಪದವಿ ವಿದ್ಯಾರ್ಥಿಗಳು ತಮ್ಮ ಸಂಶೋಧನಾ ಪ್ರಬಂಧಗಳನ್ನು ಆಗಸ್ಟ್ 31ರೊಳಗೆ ಸಲ್ಲಿಸಬೇಕು. ಸೆಪ್ಟೆಂಬರ್ 15ರಿಂದ ಪ್ರಮಾಣಪತ್ರ ಸಲ್ಲಿಕೆ ಆರಂಭವಾಗಲಿದೆ. ಸೆ.30ರೊಳಗೆ ಎಲ್ಲ ಎಂಎಸ್ಸಿ, ಪಿಎಚ್.ಡಿ ವಿದ್ಯಾರ್ಥಿಗಳ ಪದವಿ ಕೋರ್ಸ್ ಮುಗಿಸಿ, ಉನ್ನತ ವ್ಯಾಸಂಗ ಕೈಗೆತ್ತಿಕೊಳ್ಳಬಹುದು’ ಎಂದು ಸಲಹೆ ನೀಡಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.