ಶನಿವಾರ, 27 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಡೆಲ್ಟಾ ಎಲೆಕ್ಟ್ರಾನಿಕ್ಸ್‌–ಬಿಎಂಆರ್‌ಸಿಎಲ್‌ ಒಪ್ಪಂದ

Published 14 ಮಾರ್ಚ್ 2024, 15:26 IST
Last Updated 14 ಮಾರ್ಚ್ 2024, 15:26 IST
ಅಕ್ಷರ ಗಾತ್ರ

ಬೆಂಗಳೂರು: ಬೊಮ್ಮಸಂದ್ರ ಮೆಟ್ರೊ ನಿಲ್ದಾಣಕ್ಕೆ ಹಣಕಾಸಿನ ನೆರವು ನೀಡಲು ಬೆಂಗಳೂರು ಮೆಟ್ರೊ ರೈಲು ಕಾರ್ಪೊರೇಶನ್ ಲಿಮಿಟೆಡ್‌ (ಬಿಎಂಆರ್‌ಸಿಎಲ್‌) ಮತ್ತು ಡೆಲ್ಟಾ ಎಲೆಕ್ಟ್ರಾನಿಕ್ಸ್‌ ಇಂಡಿಯಾ ಪ್ರೈವೆಟ್‌ ಲಿಮಿಟೆಡ್‌ ನಡುವೆ ಗುರುವಾರ ಒಡಂಬಡಿಕೆ ನಡೆದಿದೆ.

ಈ ಒಡಂಬಂಡಿಕೆಯ ಪ್ರಕಾರ ಆರ್‌.ವಿ. ರಸ್ತೆ–ಬೊಮ್ಮಸಂದ್ರ ಮಾರ್ಗದಲ್ಲಿ (ಹಳದಿ) ಬೊಮ್ಮಸಂದ್ರ ಮೆಟ್ರೊ ನಿಲ್ದಾಣ ನಿರ್ಮಾಣಕ್ಕೆ ಡೆಲ್ಟಾ ಎಲೆಕ್ಟ್ರಾನಿಕ್ಸ್‌ ಇಂಡಿಯಾ ₹ 65 ಕೋಟಿ ನೀಡಲಿದ್ದು, ಗುರುವಾರ ₹10 ಕೋಟಿ ನೀಡಿದೆ. ಈ ನಿಲ್ದಾಣಕ್ಕೆ ‘ಡೆಲ್ಟಾ ಎಲೆಕ್ಟ್ರಾನಿಕ್ಸ್- ಬೊಮ್ಮಸಂದ್ರ ಮೆಟ್ರೊ ನಿಲ್ದಾಣ’ ಎಂದು ಹೆಸರಿಡಲಾಗುತ್ತಿದ್ದು, ಈ ನಾಮಕರಣದ ಹಕ್ಕನ್ನು 30 ವರ್ಷಗಳ ಅವಧಿಗೆ ಡೆಲ್ಟಾ ಎಲೆಕ್ಟ್ರಾನಿಕ್ಸ್‌ ಇಂಡಿಯಾಕ್ಕೆ ನೀಡಲಾಗಿದೆ.

ಬಿಎಂಆರ್‌ಸಿಎಲ್‌ ವ್ಯವಸ್ಥಾಪಕ ನಿರ್ದೇಶಕ ಎಂ. ಮಹೇಶ್ವರ ರಾವ್, ಡೆಲ್ಟಾ ಎಲೆಕ್ಟ್ರಾನಿಕ್ಸ್‌ ಇಂಡಿಯಾದ ಅಧ್ಯಕ್ಷ ಬೆಂಜಮಿನ್‌ ಲಿನ್‌ ಒಪ್ಪಂದಕ್ಕೆ ಸಹಿ ಹಾಕಿದರು. ವ್ಯವಸ್ಥಾಪಕ ನಿರ್ದೇಶಕ ನಿರಂಜನ್‌ ನಾಯಕ್‌, ಬಿಎಂಆರ್‌ಸಿಎಲ್ ಅಧಿಕಾರಿಗಳು ಉಪಸ್ಥಿತರಿದ್ದರು.

ಹಳದಿ ಮಾರ್ಗದಲ್ಲಿ ಸಹಿ ಮಾಡಲಾದ 3ನೇ ಒಡಂಬಡಿಕೆ ಇದಾಗಿದೆ. ಕೋನಪ್ಪನ ಅಗ್ರಹಾರ ಮತ್ತು ಹೆಬ್ಬಗೋಡಿ ಮೆಟ್ರೊ ನಿಲ್ದಾಣಗಳಿಗೆ ಕ್ರಮವಾಗಿ ಇನ್ಫೊಸಿಸ್ ಫೌಂಡೇಶನ್ ಮತ್ತು ಬಯೋಕಾನ್ ಫೌಂಡೇಶನ್ ಸಂಸ್ಥೆಗಳೊಂದಿಗೆ ಈಗಾಗಲೇ ಒಪ್ಪಂದ ಮಾಡಿಕೊಳ್ಳಲಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT