ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಚಿಕಿತ್ಸೆ ನೀಡಲು ₹ 50 ಸಾವಿರಕ್ಕೆ ಬೇಡಿಕೆ: ಎಫ್‌ಐಆರ್

ವಿಕ್ಟೋರಿಯಾ ಆಸ್ಪತ್ರೆಯ ನಾಲ್ವರು ಸಿಬ್ಬಂದಿ ವಿರುದ್ಧ ದೂರು ದಾಖಲು
Last Updated 29 ಜನವರಿ 2022, 21:23 IST
ಅಕ್ಷರ ಗಾತ್ರ

ಬೆಂಗಳೂರು: ಮಹಿಳೆಯೊಬ್ಬರಿಗೆ ಚಿಕಿತ್ಸೆ ನೀಡಲು ₹ 50 ಸಾವಿರಕ್ಕೆ ಬೇಡಿಕೆ ಇರಿಸಿದ್ದ ಆರೋಪದಡಿ ವಿಕ್ಟೋರಿಯಾ ಆಸ್ಪತ್ರೆಯ ನಾಲ್ವರು ಸಿಬ್ಬಂದಿ ವಿರುದ್ಧ ವಿ.ವಿ.ಪುರ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ.

‘ಭುವನೇಶ್ವರಿನಗರದ ನಿವಾಸಿ ಲಕ್ಷ್ಮಿ ಎಂಬುವರು ದೂರು ನೀಡಿದ್ದಾರೆ. ಆಸ್ಪತ್ರೆಯ ಪಿಆರ್‌ಒ ಎನ್ನಲಾದ ಆನಂದ್, ಸಹಾಯಕರಾದ ನಾಗೇಶ್, ಗಿರೀಶ್ ಹಾಗೂ ಭದ್ರತಾ ಸಿಬ್ಬಂದಿ ರಂಜಿತ್ ಎಂಬುವರ ವಿರುದ್ಧ ಪ್ರಕರಣ ದಾಖಲಿಸಿಕೊಳ್ಳಲಾಗಿದೆ. ಆರೋಪಿ ಗಳಿಗೆ ನೋಟಿಸ್ ನೀಡಿ, ವಿಚಾರಣೆ ನಡೆಸಲಾಗುವುದು’ ಎಂದು ಪೊಲೀಸ್ ಮೂಲಗಳು ಹೇಳಿವೆ.

‘ಲಕ್ಷ್ಮಿ ಅವರ ತಾಯಿ ಯಲ್ಲಮ್ಮ ಅನಾರೋಗ್ಯಕ್ಕೀಡಾಗಿದ್ದರು. ಅವರನ್ನು ಜ. 21ರಂದು ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆರೋಗ್ಯ ಸ್ಥಿತಿ ಹದಗೆಟ್ಟಿದ್ದರಿಂದ ತೀವ್ರ ನಿಗಾ ಘಟಕಕ್ಕೆ (ಐಸಿಯು) ಸ್ಥಳಾಂತರಿಸಲಾಗಿತ್ತು. ಅದೇ ಸಂದರ್ಭದಲ್ಲಿ ಆರೋಪಿಗಳು, ಚಿಕಿತ್ಸೆ ಮುಂದುವರಿಸಲು ₹ 50 ಸಾವಿರ ನೀಡುವಂತೆ ಬೇಡಿಕೆ ಇರಿಸಿದ್ದರು. ಹಣ ಕೊಡದಿದ್ದರೆ ಯಲ್ಲಮ್ಮ ಅವರು ಬದುಕು ವುದಿಲ್ಲವೆಂದು ಹೆದರಿಸಿದ್ದರು’

‘ನಾವು ಬಡವರು. ನಮ್ಮ ಬಳಿ ಹಣವಿಲ್ಲ’ ಎಂಬುದಾಗಿ ಲಕ್ಷ್ಮಿ ಹೇಳಿದ್ದರು. ಕೋಪಗೊಂಡಿದ್ದ ಆರೋಪಿಗಳು, ಅವಾಚ್ಯ ಶಬ್ದಗಳಿಂದ ನಿಂದಿಸಿದ್ದರು. ಜೀವ ಬೆದರಿಕೆಯೊಡ್ಡಿದ್ದರು. ಈ ಸಂಗತಿ ದೂರಿನಲ್ಲಿದೆ’ ಎಂದೂ ಮೂಲಗಳು ತಿಳಿಸಿವೆ. ಎಂದೂ ಮೂಲಗಳು ತಿಳಿಸಿವೆ.

ಪ್ರಕರಣದ ಬಗ್ಗೆ ಪ್ರತಿಕ್ರಿಯೆ ಪಡೆಯಲು ವಿಕ್ಟೋರಿಯಾ ಆಸ್ಪತ್ರೆ ಆಡಳಿ ತಾಧಿಕಾರಿ ಲಭ್ಯರಾಗಲಿಲ್ಲ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT