ಗುರುವಾರ, 1 ಜೂನ್ 2023
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪಿಟಿಸಿಎಲ್‌ ಸಮಗ್ರ ತಿದ್ದುಪಡಿಗೆ ಆಗ್ರಹ: ಮುಖ್ಯಮಂತ್ರಿ ಮನೆ ಎದುರು ಪ್ರತಿಭಟನೆ

ಪಿಟಿಸಿಎಲ್‌ ಸಮಗ್ರ ತಿದ್ದುಪಡಿಗೆ ಆಗ್ರಹ l 77 ದಿನ ಪೂರೈಸಿದ ಧರಣಿ
Last Updated 19 ಮಾರ್ಚ್ 2023, 21:03 IST
ಅಕ್ಷರ ಗಾತ್ರ

ಬೆಂಗಳೂರು: ‘ಪರಿಶಿಷ್ಟ ಜಾತಿ ಮತ್ತು ಪಂಗಡಗಳ ಭೂ ಪರಭಾರೆ ನಿಷೇಧ ಕಾಯ್ದೆಯ (ಪಿಟಿಸಿಎಲ್‌) ಸಮಗ್ರ ತಿದ್ದು ಪಡಿ ಮಾಡಬೇಕು’ ಎಂದು ಆಗ್ರಹಿಸಿ ಭೂ ಸಂತ್ರಸ್ತರು ಆರ್‌.ಟಿ.ನಗರ ದಲ್ಲಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮನೆ ಎದುರು ಭಾನುವಾರ ಪ್ರತಿಭಟನೆ ನಡೆಸಿದರು.

ಸಂವಿಧಾನ ಸಂರಕ್ಷಣಾ ಮಹಾ ಒಕ್ಕೂಟ ನೇತೃತ್ವದಲ್ಲಿ ನಗರದ ಸ್ವಾತಂತ್ರ್ಯ ಉದ್ಯಾನದಲ್ಲಿ 77 ದಿನಗಳಿಂದ ಧರಣಿ ನಡೆಸುತ್ತಿರುವ ಸಂತ್ರಸ್ತರು, ಬೇಡಿಕೆ ಈಡೇರಿಕೆಗಾಗಿ ಮುಖ್ಯಮಂತ್ರಿ ಮನೆಗೆ ಮುತ್ತಿಗೆ ಹಾಕಲು ತೀರ್ಮಾನಿಸಿದ್ದರು.

ಅರೆಬೆತ್ತಲಾಗಿ ಕೊರಳಿಗೆ ಮಡಕೆ ಕಟ್ಟಿಕೊಂಡು ಉದ್ಯಾನದಲ್ಲಿ ಕೆಲ ಹೊತ್ತು ಪ್ರತಿಭಟನೆ ನಡೆಸಿದರು.

ನಂತರ, ಮೆರವಣಿಗೆ ಮೂಲಕ ಆರ್‌.ಟಿ. ನಗರಕ್ಕೆ ತೆರಳಿದ್ದರು. ಮುಖ್ಯಮಂತ್ರಿ ಮನೆಗೆ ಮುತ್ತಿಗೆ ಹಾಕಲು ಯತ್ನಿಸಿದ್ದರು. ಆದರೆ, ಸ್ಥಳದಲ್ಲಿದ್ದ ಪೊಲೀಸರು ಅದಕ್ಕೆ ಅವಕಾಶ ನೀಡಲಿಲ್ಲ. ಹೀಗಾಗಿ, ರಸ್ತೆ ಮೇಲೆ ಕುಳಿತು
ಸಂತ್ರಸ್ತರು ಕೆಲ ನಿಮಿಷ ಪ್ರತಿಭಟನೆ ನಡೆಸಿದರು. ನಂತರ, ಅಲ್ಲಿಂದಲೇ ಉದ್ಯಾನದವರೆಗೆ ಕಾಲ್ನಡಿಗೆ ಜಾಥಾ ನಡೆಸಿದರು.

‘1978ರ ಕಾಯ್ದೆಯಡಿ ಪರಿಶಿಷ್ಟ ಜಾತಿ ಮತ್ತು ಪಂಗಡದವರು ಸಲ್ಲಿಸುವ ಅರ್ಜಿಗಳನ್ನು ಉಪವಿಭಾಗಾಧಿಕಾರಿ ಮತ್ತು ಜಿಲ್ಲಾಧಿಕಾರಿ ನ್ಯಾಯಾಲಯಗಳು ತಿರಸ್ಕರಿಸುತ್ತಿವೆ. ಪರಿಶಿಷ್ಟ ಜಾತಿ ಮತ್ತು ಪಂಗಡದವರ ಭೂಮಿ ಪರರ ಪಾಲಾಗುತ್ತಿದ್ದು, ಇದನ್ನು ತಡೆಯುವ ನಿಟ್ಟಿನಲ್ಲಿ ಕಾಯ್ದೆಗೆ ತಿದ್ದುಪಡಿ ತರ ಬೇಕು’ ಎಂದು ಪ್ರತಿಭಟನಕಾರರು ಒತ್ತಾಯಿ ಸಿದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ADVERTISEMENT
ADVERTISEMENT

ಇನ್ನಷ್ಟು ಸುದ್ದಿ

ಇನ್ನಷ್ಟು
ADVERTISEMENT
ADVERTISEMENT
ADVERTISEMENT
ಪ್ರಜಾವಾಣಿ ವಿಡಿಯೊ
ಸಿನಿಮಾ
ADVERTISEMENT