ಶುಕ್ರವಾರ, ಆಗಸ್ಟ್ 19, 2022
22 °C

ದೇವಾಡಿಗ ಅಭಿವೃದ್ಧಿ ನಿಗಮ ಸ್ಥಾಪನೆಗೆ ಆಗ್ರಹ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ರಾಜ್ಯದಲ್ಲಿರುವ ದೇವಾಡಿಗ ಸಮುದಾಯದ ಏಳಿಗೆಗಾಗಿ ದೇವಾಡಿಗ ಅಭಿವೃದ್ಧಿ ನಿಗಮ ಸ್ಥಾಪಿಸಬೇಕು ಎಂದು ಬೆಂಗಳೂರು ದೇವಾಡಿಗ ಸಂಘ ಒತ್ತಾಯಿಸಿದೆ. 

ಸಂಘದ ರಜನಿಕಾಂತ್‌, ‘ಉಡುಪಿ ಬಾರ್ಕೂರಿನ ಏಕನಾಥೇಶ್ವರಿ ದೇವಸ್ಥಾನದಲ್ಲಿ ನಡೆದ ದೇವಾಡಿಗ ಸಂಘಗಳ ಪದಾಧಿಕಾರಿಗಳು ಹಾಗೂ ದೇವಾಡಿಗ ಸಮಾಜದ ಮುಖಂಡರ ಸಭೆಯಲ್ಲಿ ಸಮುದಾಯಕ್ಕೆ ನಿಗಮ ರಚಿಸುವ ಸಂಬಂಧ ಒತ್ತಡ ಹೇರಲು ತೀರ್ಮಾನಿಸಲಾಯಿತು’ ಎಂದರು.

‘ಶೀಘ್ರವೇ ಸಮುದಾಯದ ನಿಯೋಗ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರನ್ನು ಭೇಟಿಯಾಗಿ ಮನವಿ ಸಲ್ಲಿಸಲಿದೆ’ ಎಂದು ಹೇಳಿದರು.

 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.