ಯಲಹಂಕ: ಬ್ಯಾಟರಾಯನಪುರ ಕ್ಷೇತ್ರದ ಬೆಟ್ಟಹಲಸೂರು ಕ್ರಾಸ್ ಬಳಿ ಮೆಟ್ರೊ ರೈಲು ನಿಲ್ದಾಣ ಸ್ಥಾಪಿಸಬೇಕು ಎಂದು ಕೋರಿ, ರೈತ ಮುಖಂಡರು ಹಾಗೂ ಸುತ್ತಮುತ್ತಲ ಗ್ರಾಮಗಳ ಮುಖಂಡರು ಸಾರ್ವಜನಿಕ ಹಿತಾಸಕ್ತಿ (ಪಿಐಎಲ್) ಅರ್ಜಿಸಲ್ಲಿಸಿದ್ದಾರೆ.

ಕರ್ನಾಟಕ ರಾಜ್ಯ ರೈತಸಂಘ ಮತ್ತು ಹಸಿರು ಸೇನೆಯ ರಾಜ್ಯ ಕಾರ್ಯದರ್ಶಿ ಬಿ.ಜಿ.ನಂಜುಂಡಪ್ಪ ಸೇರಿ ಮುಖಂಡರಾದ ಬಿ.ಸಿ.ಶಿವರಾಜ್, ಟಿ.ಪಿ.ಪ್ರಕಾಶ್, ಪಟೇಲ್.ಪಿ ಹಾಗೂ ಚಂದ್ರು. ಬಿ.ಕೆ ಅವರು ಅರ್ಜಿ(ಪಿಐಎಲ್)ಸಲ್ಲಿಸಿದ್ದಾರೆ.

‘ಉದ್ದೇಶಿತ ನಿಲ್ದಾಣದ ವ್ಯಾಪ್ತಿಯಲ್ಲಿ ಸುಮಾರು 40 ಗ್ರಾಮಗಳಿದ್ದು, ಒಂದೂವರೆ ಲಕ್ಷಕ್ಕೂ ಹೆಚ್ಚಿನ ಜನರು ಈ ಭಾಗದಲ್ಲಿ ವಾಸಿಸುತ್ತಿದ್ದಾರೆ. ಇಲ್ಲಿಗೆ ಮೆಟ್ರೊ ನಿಲ್ದಾಣ ಅತ್ಯಂತ ಅವಶ್ಯವಿರುವ ಕಾರಣ ಹೈಕೋರ್ಟ್ನಲ್ಲಿ ಪಿಐಎಲ್ ಸಲ್ಲಿಸಲಾಗಿದೆ’ ಎಂದು ರೈತಮುಖಂಡ ಬಿ.ಜಿ.ನಂಜುಂಡಪ್ಪ ತಿಳಿಸಿದರು.

ಅರ್ಜಿ ಸಲ್ಲಿಸುವುದಕ್ಕೂ ಮುನ್ನ ಮೂರ್ನಾಲ್ಕು ತಿಂಗಳುಗಳಿಂದ ಸಂಬಂಧಪಟ್ಟ ಕಚೇರಿಗಳ ಅಧಿಕಾರಿಗಳಿಗೆ ಸಾಕಷ್ಟುಬಾರಿ ಮನವಿಪತ್ರ ಸಲ್ಲಿಸಲಾಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ, ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಹಾಗೂ ಕಂದಾಯ ಸಚಿವ ಕೃಷ್ಣಬೈರೇಗೌಡ ಅವರನ್ನು ಭೇಟಿಮಾಡಿ ಮನವಿ ನೀಡಲಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.