ಸೋಮವಾರ, 6 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪುರುಷರ ಮೇಲಿನ ದೌರ್ಜನ್ಯ ಮತ್ತು ಅಪರಾಧ ತಡೆಗೆ ಪ್ರತ್ಯೇಕ ಆಯೋಗ ಸ್ಥಾಪಿಸಲು ಆಗ್ರಹ

Published 7 ಮೇ 2023, 2:51 IST
Last Updated 7 ಮೇ 2023, 2:51 IST
ಅಕ್ಷರ ಗಾತ್ರ

ಬೆಂಗಳೂರು: ‘ರಾಜ್ಯದಲ್ಲಿ ಪುರುಷರಿಗಾಗಿ ಪ್ರತ್ಯೇಕ ಆಯೋಗ ಸ್ಥಾಪಿಸಿ, ಅನುದಾನ ನೀಡಬೇಕು. ಪುರುಷರ ಮೇಲಾಗುವ ದೌರ್ಜನ್ಯ ಮತ್ತು ಅಪರಾಧ ತಡೆಯಲು ಪ್ರತ್ಯೇಕ ಸಹಾಯವಾಣಿ ಸ್ಥಾಪಿಸಿಬೇಕು’ ಎಂದು ಸೇವ್‌ ಇಂಡಿಯನ್‌ ಫ್ಯಾಮಿಲಿ–ಕರ್ನಾಟಕ ಆಗ್ರಹಿಸಿದೆ.

ಶನಿವಾರ ಇಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಂಘದ ಸದಸ್ಯ ನಿತೀನ್‌, ‘ಮಹಿಳೆಯರಿಗಿಂತ ಎರಡು ಪಟ್ಟು ಹೆಚ್ಚು ಪುರುಷರ ಮೇಲೆ ಕೌಟುಂಬಿಕ ದೌರ್ಜನ್ಯಗಳಾಗುತ್ತಿವೆ. ರಾಷ್ಟ್ರೀಯ ಅಪರಾಧ ದಾಖಲೆಗಳ ಬ್ಯೂರೋ (ಎನ್‌ಸಿಆರ್‌ಬಿ) ವರದಿ ಪ್ರಕಾರ ಕಳೆದ 5 ವರ್ಷಗಳಲ್ಲಿ ಶೇ 2ರಷ್ಟು ಪುರುಷರ ಆತ್ಮಹತ್ಯೆಗೆ ಕೌಟುಂಬಿಕ ಸಮಸ್ಯೆಗಳೇ ಕಾರಣ’ ಎಂದು ತಿಳಿಸಿದರು.

‘ದೇಶದಲ್ಲಿ ಮಹಿಳೆಯರನ್ನು ರಕ್ಷಣೆ ಮಾಡಲು ಸಾಕಷ್ಟು ಕಾನೂನುಗಳನ್ನು ರಚಿಸಲಾಗಿದೆ. ಆದರೆ, ಮಹಿಳೆಯರಿಂದ ಪುರುಷರ ಮೇಲಾಗುವ ದೌರ್ಜನ್ಯವನ್ನು ತಡೆಯಲು ಸ್ಪಷ್ಟವಾದ ಕಾನೂನುಗಳಿಲ್ಲ. ಕೌಟುಂಬಿಕ ಕಾನೂನುಗಳ ಅಡಿಯಲ್ಲಿ ಪುರುಷರ ರಕ್ಷಣೆಗೆ ಅಗತ್ಯ ಕ್ರಮ ಕೈಗೊಳ್ಳಬೇಕು’ ಎಂದು ಆಗ್ರಹಿಸಿದರು.

‘ಲಿಂಗ ಸಮಾನತೆಯ ಹೆಸರಿನಲ್ಲಿ ಹಲವಾರು ಕಠಿಣ ಕಾನೂನುಗಳನ್ನು ರೂಪಿಸಲಾಗಿದೆ. ಈ ವಿಷಯದಲ್ಲಿ ಪುರುಷರಿಗೆ ಆ ಹಕ್ಕುಗಳ ಲಾಭ ಸಿಗುತ್ತಿಲ್ಲ. ಭಾರತದಲ್ಲಿ ಪುರುಷರ ಈ ಸ್ಥಿತಿಗತಿಯ ಬಗ್ಗೆ ನಿರ್ಲಕ್ಷ್ಯ ಮಾಡಲಾಗುತ್ತಿದೆ’ ಎಂದು ಕಳವಳ ವ್ಯಕ್ತಪಡಿಸಿದರು.

ಸಂಘದ ಸದಸ್ಯರಾದ ಸೋಮನಾಥ್, ಮಣಿಕಂದನ್, ಸುರ್ಲೀನ್‌ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT