ಭಾನುವಾರ, ಜೂಲೈ 5, 2020
28 °C

ಮಾಧುಸ್ವಾಮಿ ವಿರುದ್ಧ ಎಫ್ಐಆರ್‌ ದಾಖಲಿಸಲು ಆಗ್ರಹ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ರೈತ ಮಹಿಳೆಯನ್ನು ನಿಂದಿಸಿರುವ ಕಾನೂನು ಸಚಿವ ಜೆ.ಸಿ.ಮಾಧುಸ್ವಾಮಿ ವಿರುದ್ಧ ಎಫ್‌ಐಆರ್‌ ದಾಖಲಿಸಬೇಕೆಂದು ಕರ್ನಾಟಕ ಕಿಸಾನ್‌ ಕಾಂಗ್ರೆಸ್‌ ಅಧ್ಯಕ್ಷ ಸಚಿನ್ ಮೀಗಾ ಒತ್ತಾಯಿಸಿದ್ದಾರೆ.

ಇಲ್ಲವಾದರೆ ಶುಕ್ರವಾರ ಬೆಳಿಗ್ಗೆ ರಾಜ್ಯ ಪೊಲಿಸ್‌ ಮಹಾನಿರ್ದೇಶಕ ‍ಪ್ರವೀಣ್‌ ಸೂದ್‌ ಅವರ ಕಚೇರಿ ಮುಂದೆ ಸತ್ಯಾಗ್ರಹ ನಡೆಸಲಾಗುವುದು. ಮಾಧುಸ್ವಾಮಿ ರೈತ ಮಹಿಳೆ ಬಳಿ ಕ್ಷಮೆ ಯಾಚಿಸಬೇಕು ಎಂದು ಮೀಗಾ ಹೇಳಿದ್ದಾರೆ. 

ಶರವಣ ಆಕ್ರೋಶ:ಅಹವಾಲು ಸಲ್ಲಿಸಲು ಬಂದ ರೈತ ಮಹಿಳೆಯನ್ನು ನಿಂದಿಸಿದ ಸಚಿವ ಮಾಧುಸ್ವಾಮಿ ಅವರ ವರ್ತನೆ ಅಕ್ಷಮ್ಯ. ಮಹಿಳೆ ಬಳಿ ಸಚಿವರು ಕ್ಷಮೆ ಯಾಚಿಸಬೇಕು ಎಂದು ವಿಧಾನಪರಿಷತ್‌ ಸದಸ್ಯ ಟಿ.ಎ.ಶರವಣ ಆಗ್ರಹಿಸಿದ್ದಾರೆ.

ರೈತ ನಮ್ಮ ದೇಶದ ಬೆನ್ನೆಲುಬು ಎಂದರೆ ಮಾತ್ರ ಸಾಲದು, ಅವರಿಗೆ ಸಲ್ಲಬೇಕಾದ ಗೌರವವನ್ನು ನಾವು ಸಲ್ಲಿಸಲೇಬೇಕು ಎಂದೂ ಹೇಳಿದ್ದಾರೆ.

 

 

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು