ಬೆಂಗಳೂರು: ರಾಜ್ಯದಲ್ಲಿ ದ್ವಿಭಾಷಾ ನೀತಿ ಜಾರಿಗೊಳಿಸಬೇಕು ಎಂದು 'ನಮ್ಮ ನಾಡು ನಮ್ಮ ಆಳ್ವಿಕೆ' ಸಂಸ್ಥೆ ಆಗ್ರಹಿಸಿದೆ.

ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಂಸ್ಥೆಯ ಅಧ್ಯಕ್ಷ ಕವಿರಾಜ್, ಉಪಾಧ್ಯಕ್ಷ ಅರುಣ್ ಜಾವಗಲ್, ‘ತಮಿಳುನಾಡು ಮಾದರಿಯಲ್ಲಿ ನಮ್ಮ ರಾಜ್ಯದಲ್ಲೂ ದ್ವಿಭಾಷಾ ನೀತಿಯನ್ನು ಜಾರಿಗೊಳಿಸಬೇಕು. ತ್ರಿಭಾಷಾ ನೀತಿಯಿಂದ ದಕ್ಷಿಣ ಭಾರತದ ವಿದ್ಯಾರ್ಥಿಗಳಿಗೆ ಯಾವುದೇ ರೀತಿಯ ಅನುಕೂಲವಾಗುತ್ತಿಲ್ಲ. ಇದು ಕೇಂದ್ರ ಸರ್ಕಾರದ ಹಿಂದಿ ಹೇರಿಕೆಯ ಒಂದು ಭಾಗವಾಗಿದೆ’ ಎಂದು ಆರೋಪಿಸಿದರು.

‘ತ್ರಿಭಾಷಾ ನೀತಿಯಿಂದಾಗಿ ನಮ್ಮ ಮಕ್ಕಳು ಹೆಚ್ಚುವರಿಯಾಗಿ ಹಿಂದಿ ಕಲಿಯಬೇಕಾಗಿದೆ. 2024–25ನೇ ಶೈಕ್ಷಣಿಕ ಸಾಲಿನ ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ 1.24 ಲಕ್ಷ ವಿದ್ಯಾರ್ಥಿಗಳು ಹಿಂದಿ ವಿಷಯದಲ್ಲಿ ಅನುತ್ತೀರ್ಣರಾಗಿದ್ದಾರೆ. ದ್ವಿಭಾಷಾ ನೀತಿ ಹೋರಾಟ ಬೆಂಬಲಿಸಿ, ಈಗಾಗಲೇ ಆನ್ಲೈನ್ ಮೂಲಕ ನಡೆಯುತ್ತಿರುವ ಅಭಿಯಾನಕ್ಕೆ 30 ಸಾವಿರಕ್ಕೂ ಹೆಚ್ಚು ಜನ ಸಹಿ ಹಾಕಿದ್ದಾರೆ ಎಂದರು.

ಚಲನಚಿತ್ರ ನಿರ್ದೇಶಕ ಬಿ.ಎಂ. ಗಿರಿರಾಜ್, ಸಾಮಾಜಿಕ ಕಾರ್ಯಕರ್ತ ಡಾ. ರಮೇಶ್ ಬೆಲ್ಲಂಕೊಂಡ ಸುದ್ದಿಗೋಷ್ಠಿಯಲ್ಲಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.