ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಒಕ್ಕೂಟದ ಪ್ರಧಾನ ಕಾರ್ಯದರ್ಶಿ ಜಿ.ಎಸ್. ಮಹಾದೇವಯ್ಯ, ‘ಸಾರಿಗೆ ನೌಕರರ ವೇತನ ಪರಿಷ್ಕರಣೆಯಾದ 2020ರ ಜನವರಿ 1ಕ್ಕೆ ಅನ್ವಯವಾಗುವಂತೆ 38 ತಿಂಗಳ ಬಾಕಿ ವೇತನ ಪಾವತಿಸಬೇಕು. 2024ರ ಜನವರಿ 1ರಿಂದ ಅನ್ವಯವಾಗುವಂತೆ ವೇತನ ಪರಿಷ್ಕರಣೆಯನ್ನು ತಕ್ಷಣ ಜಾರಿಗೊಳಿಸಬೇಕು. ಡಾಬಾ, ಹೋಟೆಲ್‌ಗಳಲ್ಲಿ ವಾಹನ ನಿಲ್ಲಿಸುವ ಪದ್ಧತಿ ಸ್ಥಗಿತಗೊಳಿಸಿ, ಉತ್ತಮ ಕ್ಯಾಂಟೀನ್ ವ್ಯವಸ್ಥೆ ಕಲ್ಪಿಸಬೇಕು’ ಎಂದು ಒತ್ತಾಯಿಸಿದರು.