ಸೋಮವಾರ, ಜನವರಿ 18, 2021
17 °C

ವೈದ್ಯಕೀಯ ಪರೀಕ್ಷೆ ಮುಂದೂಡಿಕೆಗೆ ಆಗ್ರಹ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ‘ರಾಜೀವ್ ಗಾಂಧಿ ಆರೋಗ್ಯ ವಿಶ್ವವಿದ್ಯಾಲಯದ ವೈದ್ಯಕೀಯ ಪರೀಕ್ಷೆಗಳನ್ನು ಮುಂದೂಡಬೇಕು’ ಎಂದು ಒತ್ತಾಯಿಸಿ ವಿದ್ಯಾರ್ಥಿಗಳು ಮಂಗಳವಾರ ಪ್ರತಿಭಟನೆ ನಡೆಸಿದರು.

ನಗರದ ವಿಶ್ವವಿದ್ಯಾಲಯದ ಆವರಣದಲ್ಲಿ ಸೇರಿದ್ದ ವಿದ್ಯಾರ್ಥಿಗಳು, ಕೊರೊನಾ ಸೋಂಕು  ಹರಡುತ್ತಿರುವ ದಿನಗಳಲ್ಲಿ ತರಾತುರಿಯಲ್ಲಿ ಪರೀಕ್ಷೆ ಹಮ್ಮಿಕೊಳ್ಳುತ್ತಿರುವ ವಿಶ್ವವಿದ್ಯಾಲಯದ ಕ್ರಮಕ್ಕೆ ತೀವ್ರ ಅಸಮಾಧಾನ ವ್ಯಕ್ತಪಡಿಸಿದರು.

‘ಜ. 19ರಿಂದ ಪರೀಕ್ಷೆ ನಡೆ ಸುವುದಾಗಿ ವಿಶ್ವವಿದ್ಯಾಲಯ ಸುತ್ತೋಲೆ ಹೊರಡಿಸಿದೆ. ಇಷ್ಟುದಿನ ನಡೆಸಲಾದ ಆನ್‌ಲೈನ್ ತರಗತಿಗೆ ಹಾಜರಾಗಲು ಬಹುತೇಕ ವಿದ್ಯಾರ್ಥಿ ಗಳಿಗೆ ಸಾಧ್ಯವಾಗಿಲ್ಲ. ಪರೀಕ್ಷೆಗೆ ಶೇ 97.74ರಷ್ಟು ವಿದ್ಯಾರ್ಥಿಗಳು ಹಾಜರಾಗುವುದು ಅನುಮಾನವಿದೆ’ ಎಂದರು.

‘ವಿದ್ಯಾರ್ಥಿಗಳ ಭವಿಷ್ಯ ಹಾಗೂ ಆರೋಗ್ಯದ ದೃಷ್ಟಿಯಿಂದ ಪರೀಕ್ಷೆಗಳನ್ನು ಮುಂದೂಡಬೇಕೆಂದು ಒತ್ತಾಯಿಸಿ ಪ್ರತಿಭಟನೆ ಹಮ್ಮಿಕೊಳ್ಳ ಲಾಗಿದೆ. ಇದಕ್ಕೆ 70 ಸಾವಿರಕ್ಕೂ ಹೆಚ್ಚು ವಿದ್ಯಾರ್ಥಿಗಳು ಮತ್ತು ಪೋಷಕರು ಬೆಂಬಲ ವ್ಯಕ್ತಪಡಿಸಿದ್ದಾರೆ’ ಎಂದೂ ಪ್ರತಿಭಟನಕಾರರು ಹೇಳಿದರು.

ಅಖಿಲ ಭಾರತೀಯ ಪ್ರಜಾಸತ್ತಾತ್ಮಕ ವಿದ್ಯಾರ್ಥಿಗಳ ಒಕ್ಕೂಟ ಹಾಗೂ ವೈದ್ಯಕೀಯ ವಿದ್ಯಾರ್ಥಿಗಳ ಹೋರಾಟ ಸಮಿತಿ ನೇತೃತ್ವದಲ್ಲಿ ಪ್ರತಿಭಟನೆ ಹಮ್ಮಿಕೊಳ್ಳಲಾಗಿತ್ತು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು