ಶುಕ್ರವಾರ, 11 ಅಕ್ಟೋಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ಪೌರ ಕಾರ್ಮಿಕರ ಸೇವೆ ಕಾಯಂಗೊಳಿಸಲು ಆಗ್ರಹ

Published : 14 ಸೆಪ್ಟೆಂಬರ್ 2024, 21:13 IST
Last Updated : 14 ಸೆಪ್ಟೆಂಬರ್ 2024, 21:13 IST
ಫಾಲೋ ಮಾಡಿ
Comments

ಬೆಂಗಳೂರು: ರಾಜ್ಯದ ನಗರ ಸ್ಥಳೀಯ ಸಂಸ್ಥೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ನೇರ ಪಾವತಿ ಪೌರ ಕಾರ್ಮಿಕರು, ಗುತ್ತಿಗೆ ಆಧಾರದಲ್ಲಿ ಕೆಲಸ ಮಾಡುತ್ತಿರುವ ಲೋಡರ್ಸ್‌, ವಾಹನ ಚಾಲಕರು ಸೇರಿದಂತೆ ಸ್ವಚ್ಛತಾ ಕಾರ್ಮಿಕರ ಸೇವೆಯನ್ನು ಸೆಪ್ಟೆಂಬರ್‌ 23ರೊಳಗೆ (ಪೌರಕಾರ್ಮಿಕರ ದಿನಾಚರಣೆ) ಕಾಯಂಗೊಳಿಸಬೇಕು ಎಂದು ಸಫಾಯಿ ಕರ್ಮಚಾರಿ ಕಾವಲು ಸಮಿತಿ ಆಗ್ರಹಿಸಿದೆ.

ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಮಿತಿ ರಾಜ್ಯ ಸಂಚಾಲಕ ಕೆ.ಬಿ. ಓಬಳೇಶ, ‘ಕಾಂಗ್ರೆಸ್‌ ನೇತೃತ್ವದ ಸರ್ಕಾರ 2017ರಲ್ಲಿ 10 ಸಾವಿರ ಪೌರ ಕಾರ್ಮಿಕರನ್ನು ನೇರ ನೇಮಕಾತಿ ಮಾಡಿಕೊಳ್ಳಲಾಗಿತ್ತು. ಅದೇ ರೀತಿ ಮಹಾನಗರ ಪಾಲಿಕೆ, ನಗರಸಭೆ, ಪುರಸಭೆ ಮತ್ತು ಪಟ್ಟಣ ಪಂಚಾಯಿತಿಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ನೇರ ಪಾವತಿ ಪೌರ ಕಾರ್ಮಿಕರನ್ನು ನೇರ ನೇಮಕಾತಿ ಮಾಡಿಕೊಳ್ಳಬೇಕು’ ಎಂದು ಒತ್ತಾಯಿಸಿದರು.

‘ರಾಜ್ಯದಲ್ಲಿ ಎಲ್ಲ ಪೌರ ಕಾರ್ಮಿಕರನ್ನು ಗುತ್ತಿಗೆ ಪದ್ಧತಿಯಿಂದ ಮುಕ್ತಿಗೊಳಿಸಬೇಕು. ಕಾಯಂ ಪೌರ ಕಾರ್ಮಿಕರಿಗೆ ಮಾತ್ರ ಗೃಹ ಭಾಗ್ಯ ಯೋಜನೆ ಅನ್ವಯವಾಗುತ್ತಿದೆ. ಇದನ್ನು ಎಲ್ಲ ಪೌರ ಕಾರ್ಮಿಕರಿಗೂ ವಿಸ್ತರಿಸಬೇಕು. ನೇರ ಪಾವತಿ ಪೌರಕಾರ್ಮಿಕರು, ಒಳಚರಂಡಿ ಸ್ವಚ್ಛತಾ ಕಾರ್ಮಿಕರು, ಲೋಡರ್ಸ್‌, ವಾಹನ ಚಾಲಕರ ಮಕ್ಕಳ ಉನ್ನತ ವ್ಯಾಸಂಗ ಮಾಡಲು ಪ್ರೋತ್ಸಾಹ ಧನ ನೀಡಬೇಕು’ ಎಂದು ಆಗ್ರಹಿಸಿದರು.

‘ಸೆ. 23ರೊಳಗೆ ಪೌರ ಕಾರ್ಮಿಕರ ಸೇವೆಯನ್ನು ಕಾಯಂಗೊಳಿಸದಿದ್ದರೆ ರಾಜ್ಯದಾದ್ಯಂತ ಅನಿರ್ದಿಷ್ಟಾವಧಿ ಮುಷ್ಕರ ಹಮ್ಮಿಕೊಳ್ಳಲಾಗುವುದು’ ಎಂದು ಎಚ್ಚರಿಕೆ ನೀಡಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT