ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕಾರ್ಮಿಕ ವಿರೋಧಿ ಕಾನೂನು ವಾಪಸ್‌ಗೆ ಆಗ್ರಹ

ಸಿಐಟಿಯು 17ನೇ ಅಖಿಲ ಭಾರತ ಸಮ್ಮೇಳನದಲ್ಲಿ ನಿರ್ಣಯ
Last Updated 20 ಜನವರಿ 2023, 16:19 IST
ಅಕ್ಷರ ಗಾತ್ರ

ಬೆಂಗಳೂರು: ಸಿಐಟಿಯು 17ನೇ ಅಖಿಲ ಭಾರತ ಸಮ್ಮೇಳನದಲ್ಲಿ ಕೇಂದ್ರದ ಬಿಜೆಪಿ ಸರ್ಕಾರ ಕಾರ್ಮಿಕ ವಿರೋಧಿ ಕಾನೂನುಗಳನ್ನು ಕೂಡಲೇ ವಾಪಸ್‌ ಪಡೆಯಬೇಕು. ಕಾರ್ಮಿಕ ಹಕ್ಕುಗಳ ರಕ್ಷಣೆಗೆ ಸರ್ಕಾರಗಳು ಮುಂದಾಗಬೇಕು. ವಿದ್ಯುತ್‌ ಕ್ಷೇತ್ರದಲ್ಲಿ ಖಾಸಗಿಯವರ ಪ್ರವೇಶ ಬೇಡ ಎಂಬ ನಿರ್ಣಯ ಅಂಗೀಕರಿಸಲಾಗಿದೆ.

ಸೆಂಟರ್‌ ಆಫ್‌ ಇಂಡಿಯನ್‌ ಟ್ರೇಡ್‌ ಯೂನಿಯನ್ಸ್‌(ಸಿಐಟಿಯು) ಅಖಿಲ ಭಾರತ ಅಧ್ಯಕ್ಷೆ ಕೆ. ಹೇಮಲತಾ ಅವರು ಶುಕ್ರವಾರ ಕೈಗೊಂಡ ನಿರ್ಣಯಗಳ ಬಗ್ಗೆ ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡಿದರು.

‘ರೈತ ವಿರೋಧಿ ಕೃಷಿ ಕಾಯ್ದೆಗಳನ್ನು ರದ್ದುಪಡಿಸಬೇಕೆಂದು ಒಂದು ವರ್ಷ ಹೋರಾಟ ನಡೆದಿದ್ದು, ಅದಕ್ಕೆ ಮಣಿದಿದ್ದ ಕೇಂದ್ರ ಸರ್ಕಾರ ಕಾಯ್ದೆಗಳನ್ನು ವಾಪಸ್‌ ಪಡೆಯುವ ಬಗ್ಗೆ ನೀಡಿದ್ದ ಭರವಸೆ ಇಂದಿಗೂ ಈಡೇರಿಲ್ಲ’ ಎಂದರು.

‘ದೆಹಲಿಯಲ್ಲಿ 2023ರ ಏಪ್ರಿಲ್‌ 5 ರಂದು ರೈತ-ಕಾರ್ಮಿಕರ ಬೇಡಿಕೆಗಳನ್ನು ಈಡೇರಿಸಬೇಕೆಂದು ಬೃಹತ್‌ ಪ್ರತಿಭಟನಾ ಪ್ರದರ್ಶನ ನಡೆಯಲಿದೆ. ಈ ಒಗ್ಗಟ್ಟಿನ ಹೋರಾಟದಲ್ಲಿ ದೇಶದ ವಿವಿಧ ಭಾಗಗಳಿಂದ ರೈತ-ಕಾರ್ಮಿಕರು, ಕೃಷಿಕೂಲಿಕಾರರು, ಮಹಿಳೆಯರು, ಯುವಜನ-ವಿದ್ಯಾರ್ಥಿಗಳು ಭಾಗವಹಿಸಲಿದ್ದಾರೆ’ ಎಂದರು.

‘ಅಂತರರಾಷ್ಟ್ರೀಯ ಮಟ್ಟದಲ್ಲಿ ಕಾರ್ಮಿಕ ಚಳವಳಿ ದೊಡ್ಡ ಪ್ರಮಾಣದಲ್ಲಿ ನಡೆಯುತ್ತಿದೆ. ಫ್ರಾನ್ಸ್‌ನಲ್ಲಿ ಸತತ ಪ್ರತಿಭಟನೆಗಳು ನಡೆದಿದ್ದು, ನೌಕರರ ನಿವೃತ್ತಿ ಅವಧಿ ಬದಲಾವಣೆಯನ್ನು ವಿರೋಧಿಸಿ ಕಾರ್ಮಿಕರು ವಿರೋಧ ವ್ಯಕ್ತಪಡಿಸಿ ವಿರೋಧ ವ್ಯಕ್ತಪಡಿಸಿದರು. ಅಂತರರಾಷ್ಟ್ರೀಯ ಮಟ್ಟದಲ್ಲಿ ಬಂಡವಾಳಶಾಹಿಗಳ ವಿರುದ್ಧ ಜರುಗುತ್ತಿರುವ ಜನ ಚಳವಳಿಯನ್ನು ಸಿಐಟಿಯು ಸಂಘಟನೆಯು ಸೌಹಾರ್ದಯುತವಾಗಿ ಬೆಂಬಲಿಸಲಿದೆ’ ಎಂದು ಹೇಮಲತಾ ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT