ಭಾನುವಾರ, 25 ಫೆಬ್ರುವರಿ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಆರ್ಚ್‌ ಬಿಷಪ್‌ ಹೆಸರಿನಲ್ಲಿ ಹಣಕ್ಕೆ ಬೇಡಿಕೆ: ಎಫ್‌ಐಆರ್ ದಾಖಲು

Published 28 ಜನವರಿ 2024, 16:30 IST
Last Updated 28 ಜನವರಿ 2024, 16:30 IST
ಅಕ್ಷರ ಗಾತ್ರ

ಬೆಂಗಳೂರು: ಬೆಂಗಳೂರು ಧರ್ಮ ಪ್ರಾಂತ್ಯದ ಆರ್ಚ್‌ ಬಿಷಪ್‌ ಪೀಟರ್‌ ಮಚಾಡೊ ಹೆಸರಿನಲ್ಲಿ ನಕಲಿ ಇ–ಮೇಲ್ ಸೃಷ್ಟಿಸಿರುವ ಸೈಬರ್ ವಂಚಕರು ಹಣಕ್ಕೆ ಬೇಡಿಕೆ ಇರಿಸುತ್ತಿದ್ದು, ಈ ಸಂಬಂಧ ಪೂರ್ವ ವಿಭಾಗದ ಸೈಬರ್ ಕ್ರೈಂ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

‘ಸೈಬರ್ ವಂಚನೆ ಸಂಬಂಧ ಜೆ.ಎ. ಕಾಂತರಾಜ್ ಅವರು ದೂರು ನೀಡಿದ್ದಾರೆ. ಅಪರಿಚಿತರ ವಿರುದ್ಧ ಎಫ್‌ಐಆರ್ ದಾಖಲಿಸಿಕೊಂಡು, ತನಿಖೆ ಮುಂದುವರಿಸಲಾಗಿದೆ’ ಎಂದು ಪೊಲೀಸ್ ಮೂಲಗಳು ಹೇಳಿವೆ.

‘ಆರ್ಚ್‌ ಬಿಷಪ್‌ ಪೀಟರ್‌ ಮಚಾಡೊ ಹೆಸರು ಬಳಸಿಕೊಂಡು msgr.machado@gmail.com ನಕಲಿ ಇ–ಮೇಲ್ ಸೃಷ್ಟಿಸಲಾಗಿದೆ. ಅದೇ ಇ–ಮೇಲ್‌ನಿಂದ ಹಲವರಿಗೆ ಸಂದೇಶ ಕಳುಹಿಸಿ, ಹಣಕ್ಕೆ ಬೇಡಿಕೆ ಇರಿಸಲಾಗಿತ್ತು. ಸಂದೇಶ ಗಮನಿಸಿದ್ದ ಕೆಲವರು ದೂರುದಾರರಿಗೆ ಮಾಹಿತಿ ನೀಡಿದ್ದರು’ ಎಂದು ಮೂಲಗಳು ತಿಳಿಸಿವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT