ಭಾನುವಾರ, 6 ಅಕ್ಟೋಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ಮುನಿರತ್ನ ಶಾಸಕ ಸ್ಥಾನ ರದ್ದುಗೊಳಿಸಲು ಒತ್ತಾಯ: ಪ್ರತಿಭಟನೆ

Published : 17 ಸೆಪ್ಟೆಂಬರ್ 2024, 15:52 IST
Last Updated : 17 ಸೆಪ್ಟೆಂಬರ್ 2024, 15:52 IST
ಫಾಲೋ ಮಾಡಿ
Comments

ಬೆಂಗಳೂರು: ಪರಿಶಿಷ್ಟ ಜಾತಿ ಹಾಗೂ ಒಕ್ಕಲಿಗ ಸಮುದಾಯದ ಮಹಿಳೆಯರನ್ನು ನಿಂದಿಸಿರುವ ಮುನಿರತ್ನ ಅವರನ್ನು ಶಾಸಕ ಸ್ಥಾನದಿಂದ ಅನರ್ಹಗೊಳಿಸಬೇಕು ಎಂದು ಆಗ್ರಹಿಸಿ ದಲಿತ ಸಂಘರ್ಷ ಸಮಿತಿ ಸದಸ್ಯರು ಮಂಗಳವಾರ ಪ್ರತಿಭಟನೆ ನಡೆಸಿದರು.

ನಗರದ ಸ್ವಾತಂತ್ರ್ಯ ಉದ್ಯಾನದಲ್ಲಿ ಪ್ರತಿಭಟನೆ ಬಳಿಕ, ವಿಧಾನಸಭಾ ಅಧ್ಯಕ್ಷ ಯು.ಟಿ.ಖಾದರ್ ಅವರ ಕಚೇರಿಗೆ ತೆರಳಿದ ಪ್ರತಿಭಟನಕಾರರು, ಸಭಾಧ್ಯಕ್ಷರ ಕಚೇರಿ ಅಧಿಕಾರಿಗಳಿಗೆ ಮನವಿ ಪತ್ರ ಸಲ್ಲಿಸಿದರು.

‘ಪರಿಶಿಷ್ಟ ಜಾತಿಯ ಜನರು ಹಾಗೂ ಮಹಿಳೆಯರ ಬಗ್ಗೆ ಕೀಳಾಗಿ ಮಾತನಾಡಿದ್ದಾರೆ. ಗುತ್ತಿಗೆದಾರರಿಂದ ಲಂಚಕ್ಕೆ ಬೇಡಿಕೆ ಇಟ್ಟಿರುವುದು ಸಂವಿಧಾನ ವಿರೋಧಿ. ಜನರ ಸಮಸ್ಯೆಗಳಿಗೆ ಸ್ಪಂದಿಸುವ ಬದಲು, ಜೀವ ಬೆದರಿಕೆ ಹಾಕಿರುವ ಆರೋಪಿ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು’ ಎಂದು ಪ್ರತಿಭಟನಕಾರರು ಆಗ್ರಹಿಸಿದರು.

‘ಮುನಿರತ್ನ ಅವರ ವರ್ತನೆ ಸಂವಿಧಾನ ವಿರೋಧಿಯಾಗಿದ್ದು, ಮುಂದಿನ ಯಾವುದೇ ಚುನಾವಣೆಯಲ್ಲಿ ಅವರು ಸ್ಪರ್ಧಿಸದಂತೆ ರಾಜ್ಯಪಾಲರು ಕ್ರಮ ಕೈಗೊಳ್ಳಬೇಕು’ ಎಂದು ಒತ್ತಾಯಿಸಿದರು.

ದಲಿತ ಸಂಘರ್ಷ ಸಮಿತಿ ರಾಜ್ಯ ಸಂಚಾಲಕ ಗುರುಪ್ರಸಾದ್‌ ಕೆರಗೋಡು, ಮುಖಂಡರಾದ ಇಂದೂಧರ ಹೊನ್ನಾಪುರ, ಎಂ.ವೆಂಕಟೇಶ್, ಆಲಗೋಡು ಶಿವಕುಮಾರ್, ಜಯಂತಿ, ಕೃಷ್ಣಮೂರ್ತಿ, ರಾಮಣ್ಣ ಭಾಗವಹಿಸಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT