ಬೆಂಗಳೂರು: ಬೌದ್ಧರ ಪವಿತ್ರ ಸ್ಥಳ, ಬಿಹಾರದ ಬೋಧಗಯಾ ಮಹಾಬೋಧಿ, ಮಹಾವಿಹಾರದ ಆಡಳಿತವನ್ನು ಸಂಪೂರ್ಣವಾಗಿ ಬೌದ್ಧರಿಗೆ ನೀಡಬೇಕು ಎಂದು ಆಗ್ರಹಿಸಿ ಮಂಗಳವಾರ ಉಪಾಸಿಕ ಮತ್ತು ಉಪಾಸಕ ಚಾರಿಟೇಬಲ್ ಟ್ರಸ್ಟ್ ಹಾಗೂ ಬೋಧಗಯಾ ಮಹಾಬೋಧಿ ಮಹಾವಿಹಾರ ಮುಕ್ತಿ ಆಂದೋಲನ ವತಿಯಿಂದ ಹೋರಾಟ ಹಮ್ಮಿಕೊಳ್ಳಲಾಗಿತ್ತು.

ನಗರದ ಸ್ವಾತಂತ್ರ್ಯ ಉದ್ಯಾನದಲ್ಲಿ ಬೋಧಗಯಾ ಮಹಾಬೋಧಿ ಮಹಾವಿಹಾರ ಮುಕ್ತಿ ಆಂದೋಲನದ ರಾಜ್ಯ ಸಮಿತಿಯ ಬೆಂಗಳೂರು ಘಟಕದ ಅಧ್ಯಕ್ಷ ಬಂತೆ ಬೋಧಿದತ್ತ ನೇತೃತ್ವದಲ್ಲಿ ನಡೆದ ಹೋರಾಟದಲ್ಲಿ ಬೌದ್ಧ ಬಿಕ್ಕುಗಳು ಹಾಗೂ ಭೀಮ್ ಪ್ರಜಾ ಸಂಘದವರು ಭಾಗವಹಿಸಿದ್ದರು.

ಬಂತೆ ಬೋಧಿದತ್ತ ಮಾತನಾಡಿ, ‘ಮಹಾಬೋಧಿ, ಮಹಾವಿಹಾರದ ಆಡಳಿತ ಸಂಪೂರ್ಣವಾಗಿ ಬೌದ್ಧರಿಗೆ ನೀಡದೆ ಅನ್ಯಾಯ ಮಾಡಲಾಗಿದೆ. ಸ್ವಾತಂತ್ರ್ಯ ಪೂರ್ವದಿಂದಲೂ ನಡೆದ ಈ ಹೋರಾಟಕ್ಕೆ ಇನ್ನೂ ಜಯ ಸಿಕ್ಕಿಲ್ಲ. ಸಂವಿಧಾನದ ಕಲಂ 13, 25,26, ಮತ್ತು 29 ರ ರಕ್ಷಣೆ ಮತ್ತು ಅನುಷ್ಠಾನಕ್ಕಾಗಿ ಬಿ.ಟಿ.ಕಾಯ್ದೆ 1949 ರದ್ದುಗೊಳಿಸಿ ಬುದ್ಧ ಗಯಾದ ಮಹಾಬೋಧಿ, ಮಹಾವಿಹಾರದ ಆಡಳಿತ ಸಂಪೂರ್ಣವಾಗಿ ಬೌದ್ಧರಿಗೆ ಒಪ್ಪಿಸಬೇಕು. ದೇಶದ ಬಿಕ್ಕು ಮಹಾಸಂಘ ಫೆ.12 ರಂದು 'ದೆಹಲಿ ಚಲೋ ಮಿಷನ್ ಮಹಾಬೋಧಿ ಮಹಾವಿಹಾರ ಮುಕ್ತಿಗಾಗಿ' ದೇಶಾದ್ಯಾಂತ ಕರೆಕೊಟ್ಟಿದ್ದಾರೆ. ಆ ನಿಮಿತ್ತ ಅಂದು ದೆಹಲಿಯಲ್ಲಿ ನಡೆಯಲಿರುವ ಕಾರ್ಯಕ್ರಮದಲ್ಲಿ ಸಹಸ್ರಾರು ಮಂದಿ ಭಾಗಿಯಾಗಲಿದ್ದಾರೆ’ ಎಂದು ತಿಳಿಸಿದರು.

ಸಮಿತಿಯ ಭಂತೆ ವರಜ್ಯೋತಿ ಥೇರಾ, ಭಂತೆ ವಿನಯ ಆಚಾರ್ಯ ಮತ್ತಿತರರು ಉಪಸ್ಥಿತರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.