ಬೆಂಗಳೂರು: ರಾಜ್ಯದಲ್ಲಿ ಮೂರು–ನಾಲ್ಕು ವರ್ಷಗಳಿಂದ ಹೊಸದಾಗಿ ಪಡಿತರ ಚೀಟಿಗಳನ್ನು ನೀಡುತ್ತಿಲ್ಲ. ಇದರಿಂದಾಗಿ ಬಡವರು ಪಡಿತರ ಚೀಟಿ ಇಲ್ಲದೆ ಕಂಗಾಲಾಗಿದ್ದಾರೆ. ಹೊಸ ಪಡಿತರ ಚೀಟಿಗಳನ್ನು ನೀಡುವಂತೆ ಸರ್ಕಾರಕ್ಕೆ ನಿರ್ದೇಶನ ನೀಡಬೇಕು ಎಂದು ಸಾಮಾಜಿಕ ಕಾರ್ಯಕರ್ತ ಪವನ್ ಕುಮಾರ್ ಶಿರ್ವ ಅವರು ರಾಜ್ಯಪಾಲರಿಗೆ ಪತ್ರ ಬರೆದಿದ್ದಾರೆ.

ಅಂಗವಿಕಲರು, ದುಡಿಯಲು ಸಾಮರ್ಥ್ಯ ಇಲ್ಲದವರು, ಅನಾರೋಗ್ಯ ಪೀಡಿತರಿಗೆ ಪಡಿತರ ಚೀಟಿ ಅವಶ್ಯಕವಾಗಿದೆ. ಆಹಾರ ಸಾಮಗ್ರಿ ಪಡೆಯಲು ಮಾತ್ರವಲ್ಲದೇ ಅಯುಷ್ಮಾನ್ ಭಾರತ್ ಸೇರಿದಂತೆ ಸರ್ಕಾರದ ಯೋಜನೆಗಳ ಸೌಲಭ್ಯ ಪಡೆಯಲು ಪಡಿತರ ಚೀಟಿ ಬೇಕಾಗಿದೆ. ಮುಖ್ಯಮಂತ್ರಿ, ಆಹಾರ ಸಚಿವರಿಗೆ ಪತ್ರ ಬರೆದಿದ್ದರೂ ಯಾವುದೇ ಕ್ರಮ ಆಗಿಲ್ಲ. ಹೀಗಾಗಿ ಹೊಸ ಪಡಿತರ ಚೀಟಿಗಳನ್ನು ನೀಡುವಂತೆ ಸರ್ಕಾರಕ್ಕೆ ನಿರ್ದೇಶನ ನೀಡಬೇಕು ಎಂದು ಪತ್ರದಲ್ಲಿ ಮನವಿ ಮಾಡಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.