ಬೆಂಗಳೂರು: ಕೇಂದ್ರ ಹಾಗೂ ರಾಜ್ಯ ಸರ್ಕಾರದಿಂದ ವಿವಿಧ ಸೌಲಭ್ಯಗಳನ್ನು ಕಲ್ಪಿಸುವಂತೆ ಆಗ್ರಹಿಸಿ, ನಗರದ ಸ್ವಾತಂತ್ರ್ಯ ಉದ್ಯಾನದಲ್ಲಿ ಮಂಗಳವಾರ ಸಫಾಯಿ ಕರ್ಮಚಾರಿ ಆಂದೋಲನ್ ವತಿಯಿಂದ ಪ್ರತಿಭಟನೆ ನಡೆಸಲಾಯಿತು. ಪ್ರತಿಭಟನಕಾರರು ಸರ್ಕಾರದ ವಿರುದ್ಧ ಘೋಷಣೆ ಕೂಗಿ ಆಕ್ರೋಶ ಹೊರಹಾಕಿದರು.

ಸುಪ್ರೀಂ ಕೋರ್ಟ್ ಆದೇಶದಂತೆ 2013ರಲ್ಲಿ ನಗರದಲ್ಲಿ 203 ಫಲಾನುಭವಿಗಳನ್ನು ಆಯ್ಕೆ ಮಾಡಲಾಗಿತ್ತು. ರಾಜ್ಯದಲ್ಲಿ ಒಟ್ಟು 726 ಫಲಾನುಭವಿಗಳನ್ನು ಆಯ್ಕೆ ಮಾಡಲಾಗಿತ್ತು. ಶೇ 60ರಷ್ಟು ಮಂದಿಗಷ್ಟೇ ಸೌಲಭ್ಯ ಸಿಕ್ಕಿದೆ. ಉಳಿದ ಫಲಾನುಭವಿಗಳಿಗೆ 10 ವರ್ಷಗಳಿಂದ ಯಾವುದೇ ರೀತಿಯ ಅನುದಾನವನ್ನು ಸರ್ಕಾರ ನೀಡಿಲ್ಲ ಎಂದು ದೂರಿದರು.

ಮನೆ, ನಿವೇಶನ, ಪರ್ಯಾಯ ಉದ್ಯೋಗ, ಆರೋಗ್ಯ ಕಾರ್ಡ್ ವಿತರಣೆ ಮಾಡಿಲ್ಲ. ಶಾಲಾ–ಕಾಲೇಜು ವಿದ್ಯಾರ್ಥಿಗಳಿಗೆ ಶುಲ್ಕವನ್ನೂ ಸಹ ಪಾವತಿ ಮಾಡಿಲ್ಲ. ಕೇಂದ್ರ ಮತ್ತು ರಾಜ್ಯ ಸರ್ಕಾರದ ಯಾವುದೇ ಸೌಲಭ್ಯ ಅಥವಾ ಅನುದಾನವನ್ನು ಈ ಸಮುದಾಯದವರಿಗೆ ನೀಡಿರುವುದಿಲ್ಲ ಎಂದು ಆಕ್ರೋಶ ಹೊರಹಾಕಿದರು.

ಹಲವು ಬಾರಿ ಸರ್ಕಾರಕ್ಕೆ ಮನವಿ ಸಲ್ಲಿಸಿದ್ದರೂ ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ನಗರ ಅಧ್ಯಕ್ಷ ಜಿ.ಎನ್. ನಾಗೇಂದ್ರ ಅವರು ಹೇಳಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.