ಶನಿವಾರ, ಜನವರಿ 16, 2021
17 °C

ಕನ್ನಡ ಸಾಹಿತ್ಯ ಸಮ್ಮೇಳನ ರದ್ದುಗೊಳಿಸಲು ಆಗ್ರಹ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ನೆಲಮಂಗಲ: ದೇವನಹಳ್ಳಿ ತಾಲ್ಲೂಕಿನ ವಿಜಯಪುರದಲ್ಲಿ ಜ.3ರಿಂದ ನಡೆಯಲಿರುವ ಬೆಂಗಳೂರು ಗ್ರಾಮಾಂತರ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನವನ್ನು ರದ್ದು ಮಾಡುವಂತೆ ಕನ್ನಡ ಸಾಹಿತ್ಯ ಪರಿಷತ್ತು ಸದಸ್ಯರು ಹಾಗೂ ಕನ್ನಡಪರ ಸಂಘಗಳು ಒತ್ತಾಯಿಸಿವೆ.

ಸಮ್ಮೇಳನ ರದ್ದುಗೊಳಿಸುವಂತೆ ಕೇಂದ್ರ ಸಾಹಿತ್ಯ ಪರಿಷತ್ತು ಮತ್ತು ಜಿಲ್ಲಾಧಿಕಾರಿಗಳಿಗೆ ತಹಶೀಲ್ದಾರ್ ಮುಖೇನ ಪರಿಷತ್ತಿನ ಸದಸ್ಯರು ಹಾಗೂ ಕನ್ನಡ ಸಾಂಸ್ಕೃತಿಕ ರಂಗದ ಸದಸ್ಯರು ಶನಿವಾರ ಮನವಿ ಸಲ್ಲಿಸಿದರು.

‘ಕಳೆದ ವರ್ಷ ದೊಡ್ಡಬಳ್ಳಾಪುರದಲ್ಲಿ 22ನೇ ಜಿಲ್ಲಾ ಸಮ್ಮೇಳನ ಆಯೋಜಿಸಲಾಗಿತ್ತು. ಸಮ್ಮೇಳನದ ಅಧ್ಯಕ್ಷರಾಗಿ ತಾ.ನಾ.ಪ್ರಭುದೇವ ಅವರನ್ನು ಆಯ್ಕೆ ಮಾಡಲಾಗಿತ್ತು. ಕಾರಣಾಂತರ ಗಳಿಂದ ಸಮ್ಮೇಳನ ನಡೆಯಲಿಲ್ಲ. 22ನೇ ಸಮ್ಮೇಳನ ನಡೆಯದೇ 23ನೇ ಸಮ್ಮೇಳನ ಆಯೋಜಿಸಿರುವುದು ಸರಿಯಲ್ಲ’ ಎಂದು ಕನ್ನಡ ಸಾಂಸ್ಕೃತಿಕ ರಂಗ ಸಂಸ್ಥೆಯ ‌ಅಧ್ಯಕ್ಷ ಡಿ.ಸಿದ್ದರಾಜು ಆಕ್ಷೇಪ ವ್ಯಕ್ತಪಡಿಸಿದರು.

‘ಸಮ್ಮೇಳನದ ಸ್ಥಳ ಬದಲಾವಣೆಗೆ ಆಕ್ಷೇಪವಿಲ್ಲ. ಆದರೆ, ಸಮ್ಮೇಳನದ ಸಂಖ್ಯೆ ಮತ್ತು ಸಮ್ಮೇಳನಾಧ್ಯಕ್ಷರನ್ನು ಅವಮಾನಿಸಿ, ಮತ್ತೊಬ್ಬರನ್ನು ಆಯ್ಕೆ ಮಾಡಿರುವುದು ಸರಿಯಲ್ಲ’ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು