ಶನಿವಾರ, ಏಪ್ರಿಲ್ 4, 2020
19 °C

ಜೋಪಡಿ ತೆರವು ಪ್ರಕರಣ: ವರದಿ ಸಲ್ಲಿಕೆಗೆ ಫೆ.3ರವರೆಗೆ ಕಾಲಾವಕಾಶ ನೀಡಿದ ಹೈಕೋರ್ಟ್‌

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಬಾಂಗ್ಲಾ ವಲಸಿಗರೆಂಬ ಆರೋಪದಡಿ ನಗರದ ಕರಿಯಮ್ಮನ ಅಗ್ರಹಾರ, ಮಾರತ್ತಹಳ್ಳಿ, ಕಾಡುಬೀಸನಹಳ್ಳಿ, ಬೆಳ್ಳಂದೂರು ಸುತ್ತಮುತ್ತಲಿನ ಜೋಪಡಿಗಳಲ್ಲಿ ವಾಸಿಸುತ್ತಿದ್ದವರನ್ನು ಬಲವಂತವಾಗಿ ತೆರವು ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ವರದಿ ಸಲ್ಲಿಸಲು ಪೊಲೀಸ್ ‌ಇಲಾಖೆಗೆ ಸೋಮವಾರದವರೆಗೂ (ಫೆ.3) ಹೈಕೋರ್ಟ್‌ ಕಾಲಾವಕಾಶ ನೀಡಿದೆ.

ಹಿನ್ನೆಲೆ: ಬಾಂಗ್ಲಾ ವಲಸಿಗರು ಎಂಬ ಹಣೆಪಟ್ಟಿ ಕಟ್ಟಿ ಯಾವುದೇ ಸೂಚನೆ ನೀಡದೆ ಜೋಪಡಿಗಳನ್ನು ಈಚೆಗೆ ನೆಲಸಮ ಮಾಡಲಾಗಿತ್ತು.

ದೇವರಬಿಸನಹಳ್ಳಿಯ ಕರಿಯಮ್ಮನ ಅಗ್ರಹಾರದ ಮಂತ್ರಿ ಇಸ್ಪನ್ ಅಪಾರ್ಟ್‌ಮೆಂಟ್ ಸಮುಚ್ಚಯಕ್ಕೆ ಹೊಂದಿಕೊಂಡಿರುವ ಖುಲ್ಲಾ ಜಾಗದಲ್ಲಿ 300ಕ್ಕೂ ಹೆಚ್ಚು ಜೋಪಡಿಗಳಿದ್ದವು. ಆ ಪೈಕಿ 80ಕ್ಕೂ ಹೆಚ್ಚು ಜೋಪಡಿಗಳನ್ನು ಕೆಡವಲಾಗಿತ್ತು.

ಬಾಂಗ್ಲಾದೇಶದ ಪ್ರಜೆಗಳ ವಿರುದ್ಧ ಕಾರ್ಯಾಚರಣೆ ಆರಂಭಿಸಿದ್ದಾರೆ ಎನ್ನಲಾದ ಬಿಬಿಎಂಪಿ ಅಧಿಕಾರಿಗಳು ಹಾಗೂ ಪೊಲೀಸರು ಈ ತೆರವು ಮಾಡಿದ್ದಾರೆ. ‘ಸ್ಥಳೀಯರಿಗೆ ಬಾಂಗ್ಲಾ ಪ್ರಜೆಗಳ ಪಟ್ಟ ಕಟ್ಟಿ ನಡೆಸಲಾದ ತೆರವು ಅನಧಿಕೃತವಾದದ್ದು’ ಎಂಬ ಆರೋಪ ವ್ಯಕ್ತವಾಗಿತ್ತು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು