ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಡೆಂಗಿ: 2 ವಾರದಲ್ಲಿ 160 ಮಂದಿಗೆ ಜ್ವರ

Last Updated 30 ಮಾರ್ಚ್ 2022, 16:12 IST
ಅಕ್ಷರ ಗಾತ್ರ

ಬೆಂಗಳೂರು:ರಾಜ್ಯದಲ್ಲಿಡೆಂಗಿಪ್ರಕರಣಗಳು ಏರುಗತಿ ಪಡೆದುಕೊಂಡಿದ್ದು, ಎರಡು ವಾರದಲ್ಲಿ 160 ಪ್ರಕರಣಗಳು ದೃಢಪಟ್ಟಿವೆ.

ಈವರೆಗೆ ವರದಿಯಾದ ಒಟ್ಟು ಪ್ರಕರಣಗಳ ಸಂಖ್ಯೆ 924ಕ್ಕೆ ತಲುಪಿದೆ.ರಾಜ್ಯದ ಎಲ್ಲ ಜಿಲ್ಲೆಗಳಲ್ಲಿಡೆಂಗಿಪ್ರಕರಣಗಳು ಪತ್ತೆಯಾಗಿವೆ.ಬಿಬಿಎಂಪಿ ವ್ಯಾಪ್ತಿಯಲ್ಲಿ 205 ಮಂದಿಡೆಂಗಿಜ್ವರಕ್ಕೆ ಒಳಗಾಗಿದ್ದಾರೆ. 21 ಜಿಲ್ಲೆಗಳಲ್ಲಿ ಈ ಸಂಖ್ಯೆ ಎರಡಂಕಿ ತಲುಪಿದೆ.

ಮೈಸೂರಿನಲ್ಲಿ 83,ಉಡುಪಿ ಹಾಗೂ ದಕ್ಷಿಣ ಕನ್ನಡದಲ್ಲಿ ತಲಾ 70, ಬಳ್ಳಾರಿಯಲ್ಲಿ 68, ಚಿತ್ರದುರ್ಗ ಹಾಗೂ ಕೊಪ್ಪಳದಲ್ಲಿ ತಲಾ 64 ಪ್ರಕರಣಗಳು ದೃಢಪಟ್ಟಿವೆ. ಉಳಿದ ಜಿಲ್ಲೆಗಳಲ್ಲಿ ಈ ಸಂಖ್ಯೆ 50ಕ್ಕಿಂತ ಕಡಿಮೆ ಇವೆ. ಯಾವುದೇ ಮರಣ ಪ್ರಕರಣ ವರದಿಯಾಗಿಲ್ಲ.2021ರಲ್ಲಿ 7,189 ಮಂದಿಡೆಂಗಿಪೀಡಿತರಾಗಿದ್ದರು. ಅವರಲ್ಲಿ ಐವರು ಮೃತಪಟ್ಟಿದ್ದರು.

22 ಜಿಲ್ಲೆಗಳಲ್ಲಿಚಿಕೂನ್‌ಗುನ್ಯಾ ಪ್ರಕರಣಗಳು ಪತ್ತೆಯಾಗಿದ್ದು,232 ಮಂದಿ ಈ ಜ್ವರಕ್ಕೆ ಒಳಗಾಗಿದ್ದಾರೆ. ಕೋಲಾರದಲ್ಲಿ 42, ವಿಜಯಪುರದಲ್ಲಿ 40, ತುಮಕೂರಿನಲ್ಲಿ 28, ಬೆಂಗಳೂರು ಗ್ರಾಮಾಂತರದಲ್ಲಿ 27, ಚಿತ್ರದುರ್ಗದಲ್ಲಿ 17 ಹಾಗೂ ದಾವಣಗೆರೆಯಲ್ಲಿ 14 ಪ್ರಕರಣಗಳು ವರದಿಯಾಗಿವೆ. ಉಳಿದ ಜಿಲ್ಲೆಗಳಲ್ಲಿ ಈ ಸಂಖ್ಯೆ 10ಕ್ಕಿಂತ ಕಡಿಮೆ ಇವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT