ಭಾನುವಾರ, 14 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಡೆಂಗಿ ಪ್ರಕರಣಗಳ ಏರಿಕೆ | ಕ್ರಮ ಕೈಗೊಳ್ಳದಿದ್ದರೆ ಹೋರಾಟ: ಬಿಜೆಪಿ

Published 6 ಜುಲೈ 2024, 20:17 IST
Last Updated 6 ಜುಲೈ 2024, 20:17 IST
ಅಕ್ಷರ ಗಾತ್ರ

ಬೆಂಗಳೂರು: ‘ನಗರದಲ್ಲಿ ಡೆಂಗಿ ಪ್ರಕರಣಗಳು ಹೆಚ್ಚಾಗುತ್ತಿದ್ದು, ನಿಯಂತ್ರಣಕ್ಕೆ ಹತ್ತು ದಿನಗಳಲ್ಲಿ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳದಿದ್ದರೆ ನಗರದಾದ್ಯಂತ ಹೋರಾಟ ನಡೆಸಲಾಗುತ್ತದೆ’ ಎಂದು ಬಿಜೆಪಿಯ ಬೆಂಗಳೂರು ಮಹಾನಗರ ಘಟಕ ಎಚ್ಚರಿಸಿದೆ.

‘ನಗರದಲ್ಲಿ ಎರಡು ಸಾವಿರಕ್ಕೂ ಹೆಚ್ಚು ನಾಗರಿಕರಿಗೆ ಡೆಂಗಿ ಬಂದಿದೆ. ಮೈಸೂರಿನಲ್ಲಿ ಆರೋಗ್ಯ ಅಧಿಕಾರಿಯೇ ಮರಣ ಹೊಂದಿದ್ದಾರೆ. ಇಂತಹ ಘಟನೆ ನಗರದಲ್ಲೂ ಸಂಭವಿಸಿದ ಮೇಲೆ ಕ್ರಮ ಕೈಗೊಳ್ಳುತ್ತೀರಾ’ ಎಂದು ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್‌ ಗಿರಿನಾಥ್‌ ಅವರಿಗೆ ಘಟಕದ ವತಿಯಿಂದ
ಸಲ್ಲಿಸಿರುವ ಮನವಿಯಲ್ಲಿ ಪ್ರಶ್ನಿಸಲಾಗಿದೆ.

ಶಾಸಕ ಸಿ.ಕೆ.ರಾಮ ಮೂರ್ತಿ, ಬಿಜೆಪಿಯ ಬೆಂಗಳೂರು ಕೇಂದ್ರ ಜಿಲ್ಲೆ ಘಟಕದ ಅಧ್ಯಕ್ಷ ಸಪ್ತಗಿರಿ ಗೌಡ, ಉತ್ತರ ಜಿಲ್ಲೆ ಘಟಕದ ಅಧ್ಯಕ್ಷ ಎಸ್‌. ಹರೀಶ್‌, ಮುಖಂಡ ಗಂಗಭೈರಯ್ಯ, ಉಮೇಶ್‌ ಶೆಟ್ಟಿ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT