ಬೈಕ್‌ಗೆ ಟೆಂಪೊ ಡಿಕ್ಕಿ: ವಿದ್ಯಾರ್ಥಿ ಸಾವು

ಬೆಂಗಳೂರು: ಬೈಕ್‌ಗೆ ಟೆಂಪೊ ಡಿಕ್ಕಿಯಾಗಿದ್ದರಿಂದ ಮೊಹಮ್ಮದ್ ಮತಿನ್ (21) ಎಂಬುವರು ಮೃತಪಟ್ಟಿದ್ದಾರೆ. ಯಶವಂತಪುರ ಸಂಚಾರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
‘ದಂತವೈದ್ಯಕೀಯ ವಿದ್ಯಾರ್ಥಿಯಾಗಿರುವ ಮತಿನ್ ಗುರುವಾರ ರಾತ್ರಿ 8.30ರ ಸುಮಾರಿಗೆ ಸ್ನೇಹಿತೆ ಜೊತೆ ಯಶವಂತಪುರದಲ್ಲಿರುವ ಮನೆಗೆ ಮರಳುತ್ತಿದ್ದರು. ಸಿ.ವಿ.ರಾಮನ್ ರಸ್ತೆ ಬಳಿ ಅಪಘಾತ ನಡೆದಿದೆ. ಮತಿನ್ ಹೆಲ್ಮೆಟ್ ಧರಿಸಿರಲಿಲ್ಲ. ಹೀಗಾಗಿ ತಲೆಗೆ ಗಂಭೀರ ಪೆಟ್ಟು ಬಿದ್ದಿತ್ತು. ಚಿಕಿತ್ಸೆಗೆ ಸ್ಪಂದಿಸದೆ ಅವರು ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ’ ಎಂದು ಪೊಲೀಸ್ ಅಧಿಕಾರಿಯೊಬ್ಬರು ಹೇಳಿದ್ದಾರೆ.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.