ಮಂಗಳವಾರ, 19 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸಮಾಜ ಕಲ್ಯಾಣ ಇಲಾಖೆ ವಸತಿ ಶಾಲೆಗಳನ್ನು ಕ್ವಾರಂಟೈನ್‌ಗಳನ್ನಾಗಿ ಬಳಸಬಹುದು: ಕಾರಜೋಳ

Last Updated 27 ಮಾರ್ಚ್ 2020, 5:51 IST
ಅಕ್ಷರ ಗಾತ್ರ

ಬೆಂಗಳೂರು: ಮಾರಕ ಕೊರೊನಾ ವೈರಸ್ ನಿಯಂತ್ರಣಕ್ಕೆ ಸಮಾಜ ಕಲ್ಯಾಣ ಇಲಾಖೆಯ ವಸತಿ ಶಾಲೆಗಳನ್ನು ಕ್ವಾರಂಟೈನ್‌‌ಗಳನ್ನಾಗಿ ಬಳಕೆ ಮಾಡಿಕೊಳ್ಳುವಂತೆ ಉಪ ಮುಖ್ಯಮಂತ್ರಿ ಗೋವಿಂದ ಕಾರಜೋಳ ರಾಜ್ಯದ ಎಲ್ಲ ಜಿಲ್ಲಾಡಳಿತಕ್ಕೆ ಸೂಚಿಸಿದ್ದಾರೆ.

ಸಮಾಜ ಕಲ್ಯಾಣ ಇಲಾಖೆ ನಿರ್ವಹಿಸುವ ವಸತಿ ಶಾಲೆ ಮತ್ತು ವಿದ್ಯಾರ್ಥಿ ನಿಲಯಗಳಿಗೆ ಈಗಾಗಲೇ ರಜೆ ನೀಡಲಾಗಿದೆ.
ವಸತಿ ಶಾಲೆಯ ವಿದ್ಯಾರ್ಥಿಗಳು ಬೇಸಿಗೆ ರಜೆಯಲ್ಲಿ ಇರುವುದರಿಂದ ವಸತಿ ಶಾಲೆ ಬಳಸಿಕೊಳ್ಳಲು ಯಾವ ತೊಂದರೆಯೂ ಇರುವುದಿಲ್ಲ. ರಾಜ್ಯದ ಎಲ್ಲಾ ತಾಲೂಕು ಮತ್ತು ಜಿಲ್ಲೆಗಳಲ್ಲಿರುವ ವಸತಿ ಶಾಲೆಗಳು ಮತ್ತು ವಿದ್ಯಾರ್ಥಿ ನಿಲಯಗಳು ಅಗತ್ಯ ಮೂಲಸೌಕರ್ಯ ಹೊಂದಿವೆ. ಬಹಳಷ್ಟು ವಸತಿ ಶಾಲೆಗಳು ಊರಿನಿಂದ ಹೊರಗಿವೆ. ಅಲ್ಲದೆ ವಿಶಾಲವಾದ ಸ್ಥಳದಲ್ಲಿ ಸುಸಜ್ಜಿತವಾಗಿದ್ದು, ಪ್ರತ್ಯೇಕ ಕೊಠಡಿಗಳು, ಶೌಚಾಲಯ, ಸ್ನಾನ ಗೃಹ ಒಳಗೊಂಡಿವೆ ಎಂದು ತಿಳಿಸಿದ್ದಾರೆ.

ವಸತಿ ಶಾಲೆಗಳು ಹಾಗೂ ವಿದ್ಯಾರ್ಥಿನಿಲಯಗಳು ಜನ ಸಂದಣಿಯಿಂದ ದೂರದ ಪ್ರದೇಶಗಳಲ್ಲಿವೆ. ಹೀಗಾಗಿ ಯಾವುದೇ ವೆಚ್ಚವಿಲ್ಲದೆ ವಸತಿ ಶಾಲೆ ಮತ್ತು ವಿದ್ಯಾರ್ಥಿ ನಿಲಯಗಳನ್ನು ಕ್ವಾರಂಟೈನ್‌ಗಳನ್ನಾಗಿ ಬಳಸಿಕೊಳ್ಳಬಹುದೆಂದು ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT