ಶನಿವಾರ, 11 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಉಪಲೋಕಾಯುಕ್ತ ಹುದ್ದೆ ಶೀಘ್ರ ಭರ್ತಿಗೆ ನಿರ್ದೇಶನ

Last Updated 1 ಫೆಬ್ರುವರಿ 2021, 18:18 IST
ಅಕ್ಷರ ಗಾತ್ರ

ಬೆಂಗಳೂರು: ಉಪಲೋಕಾಯುಕ್ತ –2 ಹುದ್ದೆಯನ್ನು ಶೀಘ್ರವೇ ಭರ್ತಿ ಮಾಡಲು ಕ್ರಮ ಕೈಗೊಳ್ಳುವಂತೆ ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ನಿರ್ದೇಶನ ನೀಡಿದೆ.

ಉಪಲೋಕಾಯುಕ್ತ ಹುದ್ದೆ ಖಾಲಿ ಇದೆ ಎಂದು 2019ರಲ್ಲಿ ವಕೀಲ ಎಸ್. ಉಮಾಪತಿ ಅರ್ಜಿ ಸಲ್ಲಿಸಿದ್ದರು. ಅರ್ಜಿ ವಿಚಾರಣೆ ಬಾಕಿ ಇರುವಾಗ 2019ರ ನವೆಂಬರ್‌ನಲ್ಲಿ ನ್ಯಾಯಮೂರ್ತಿ ಬಿ.ಎಸ್. ಪಾಟೀಲ ಅವರನ್ನು ಉಪಲೋಕಾಯುಕ್ತ ಹುದ್ದೆಗೆ ನೇಮಕ ಮಾಡಿಲಾಗಿದೆ. ಮತ್ತೊಬ್ಬ ಉಪಲೋಕಾಯುಕ್ತರಾಗಿದ್ದ ನ್ಯಾಯಮೂರ್ತಿ ಎನ್. ಆನಂದ್ ಅವರು2020ರ ಡಿಸೆಂಬರ್‌ನಲ್ಲಿ ನಿವೃತ್ತಿ ಹೊಂದಿದ್ದಾರೆ ಎಂದು ಸರ್ಕಾರ ಮಾಹಿತಿ ನೀಡಿತು.

‘ಹೈಕೋರ್ಟ್‌ ಮುಖ್ಯ ನ್ಯಾಯಮೂರ್ತಿ, ವಿಧಾನಸಭೆ ಸ್ಪೀಕರ್ ಮತ್ತು ವಿಧಾನ ಪರಿಷತ್ತಿನ ಅಧ್ಯಕ್ಷರ ಜತೆ ಸಮಾಲೋಚನೆ ನಡೆಸಿ ನೇಮಕ ಮಾಡಬೇಕಾಗಿದೆ. ಹೀಗಾಗಿ ಸಮಯ ಬೇಕಾಗುತ್ತದೆ’ ಎಂದು ಸರ್ಕಾರದ ಪರ ವಕೀಲರು ತಿಳಿಸಿದರು.

ಸಾಧ್ಯವಾದಷ್ಟು ಬೇಗ ಈ ಪ್ರಕ್ರಿಯೆ ಮುಗಿಸುವಂತೆ ತಿಳಿಸಿದ ನ್ಯಾಯಮೂರ್ತಿ ಸತೀಶ್ ಚಂದ್ರ ಶರ್ಮಾ, ಅರ್ಜಿ ವಿಲೇವಾರಿ ಮಾಡಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT