ಸೋಮವಾರ, 15 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕರ್ತವ್ಯ ಲೋಪ: ಕೆ.ಆರ್.ಪುರ ಆಸ್ಪತ್ರೆ ವೈದ್ಯೆ ಅಮಾನತು

Published 2 ಏಪ್ರಿಲ್ 2024, 15:24 IST
Last Updated 2 ಏಪ್ರಿಲ್ 2024, 15:24 IST
ಅಕ್ಷರ ಗಾತ್ರ

ಬೆಂಗಳೂರು: ಕರ್ತವ್ಯ ಲೋಪ ಮತ್ತು ದುರ್ನಡತೆಯ ಆರೋಪ ಎದುರಿಸುತ್ತಿದ್ದ ಕೆ.ಆರ್.ಪುರ ಸಾರ್ವಜನಿಕ ಆಸ್ಪತ್ರೆಯ ಪ್ರಸೂತಿ ಮತ್ತು ಸ್ತ್ರೀರೋಗ ತಜ್ಞೆ ಡಾ.ಲೀಲಾ ಸಂಪತ್ ಕುಮಾರ್ ಅವರನ್ನು ಸರ್ಕಾರಿ ಸೇವೆಯಿಂದ ಅಮಾನತು ಮಾಡಲಾಗಿದೆ. 

ಈ ಬಗ್ಗೆ ಆರೋಗ್ಯ ಇಲಾಖೆ ಆಯುಕ್ತ ಡಿ. ರಂದೀಪ್ ಆದೇಶ ಹೊರಡಿಸಿದ್ದಾರೆ. ಡಾ.ಲೀಲಾ ಸಂಪತ್ ಕುಮಾರ್ ಅವರು ಕರ್ತವ್ಯದ ಅವಧಿಯಲ್ಲಿ ರೇಗಾಡುವುದು, ಅವಾಚ್ಯ ಶಬ್ದಗಳಿಂದ ನಿಂದಿಸುವುದು ಹಾಗೂ ಅಸಂವಿಧಾನಿಕ ಪದಗಳಿಂದ ನಿಂದಿಸಿ, ಮಾನಸಿಕ ಕಿರುಕುಳ ನೀಡುತ್ತಾರೆ ಎಂದು ಕೆ.ಆರ್.ಪುರ ಸಾರ್ವಜನಿಕ ಆಸ್ಪತ್ರೆಗೆ ನಿಯೋಜನೆಗೊಂಡಿದ್ದ ಸ್ನಾತಕೋತ್ತರ ವಿದ್ಯಾರ್ಥಿಗಳು ದೂರು ನೀಡಿದ್ದರು. ಆಸ್ಪತ್ರೆಯ ವೈದ್ಯರು, ಶುಶ್ರೂಷಕರು, ಅಧಿಕಾರಿಗಳು ಹಾಗೂ ಆಂಬುಲೆನ್ಸ್ ಸಿಬ್ಬಂದಿಯೂ ಅವರ ವಿರುದ್ಧ ದೂರು ನೀಡಿದ್ದರು ಎಂದು ಆದೇಶದಲ್ಲಿ ತಿಳಿಸಲಾಗಿದೆ. 

ದೂರುಗಳನ್ನು ಆಧರಿಸಿ ಆಡಳಿತ ವೈದ್ಯಾಧಿಕಾರಿ ವರದಿ ಸಲ್ಲಿಸಿದ್ದರು. ಲೀಲಾ ಸಂಪತ್ ಅವರ ವರ್ತನೆಯಿಂದ ಚಿಕಿತ್ಸೆಗೆ ಬರುವ ರೋಗಿಗಳಿಗೆ ಸಮಸ್ಯೆಯಾಗುತ್ತಿದೆ. ಆಸ್ಪತ್ರೆಯ ವಾತಾವರಣವೂ ಕೆಡುತ್ತಿದೆ ಎಂದು ವರದಿಯಲ್ಲಿ ಉಲ್ಲೇಖಿಸಿದ್ದರು. 

ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಜಿಲ್ಲಾ ಆರೋಗ್ಯಾಧಿಕಾರಿ ಡಾ.ರವೀಂದ್ರನಾಥ ಮೇಟಿ, ಜಿಲ್ಲಾ ಕುಟುಂಬ ಕಲ್ಯಾಣ ಅಧಿಕಾರಿ ಡಾ.ನದೀಮ್ ಅಹಮದ್ ಅವರು ಆಸ್ಪತ್ರೆಗೆ ಭೇಟಿ ನೀಡಿ ಪರಿಶೀಲಿಸಿದ್ದಾರೆ. ಆಸ್ಪತ್ರೆಯ ವೈದ್ಯರು ಹಾಗೂ ಸಿಬ್ಬಂದಿ ವಿಚಾರಿಸಿ ವರದಿ ಸಲ್ಲಿಸಿದ್ದಾರೆ. ಈ ವರದಿ ಆಧರಿಸಿ ಅವರನ್ನು ಅಮಾನತು ಮಾಡಲಾಗಿದೆ ಎಂದು ಆದೇಶದಲ್ಲಿ ತಿಳಿಸಲಾಗಿದೆ. 

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT