ಬೆಂಗಳೂರು: ಇನ್ಫೊಸಿಸ್ ಫೌಂಡೇಷನ್ ಅಧ್ಯಕ್ಷೆ ಸುಧಾಮೂರ್ತಿ ಅವರ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡಿ ವಿಡಿಯೊ ಹರಿಬಿಟ್ಟಿರುವ ಬಗ್ಗೆ ನಂದಿನಿ ಲೇಔಟ್ ಠಾಣೆಯಲ್ಲಿ ಎನ್ಸಿಆರ್ (ಗಂಭೀರವಲ್ಲದ ಅಪರಾಧ) ದಾಖಲಾಗಿದೆ.

‘ಕರ್ನಾಟಕ ರಕ್ಷಣಾ ವೇದಿಕೆ ಸದಸ್ಯರೊಬ್ಬರು ದೂರು ನೀಡಿದ್ದಾರೆ. ಅದನ್ನು ಆಧರಿಸಿ ಆರೋಪಿ ಅಮರ್ ವಿರುದ್ಧ ಎನ್ಸಿಆರ್ ದಾಖಲಿಸಿಕೊಳ್ಳಲಾಗಿದ್ದು, ಅದರ ವರದಿಯನ್ನು ನ್ಯಾಯಾಲಯಕ್ಕೆ ಸಲ್ಲಿಸಲಾಗಿದೆ. ನ್ಯಾಯಾಲಯದ ನಿರ್ದೇಶನದಂತೆ ಮುಂದಿನ ಕ್ರಮ ಕೈಗೊಳ್ಳಲಾಗುವುದು’ ಎಂದು ಪೊಲೀಸರು ಹೇಳಿದರು.

‘ಓಲ್ಡ್ ಟೌನ್ ಕ್ರಿಮಿನಲ್’ ಹೆಸರಿನ ಸಾಕ್ಷ್ಯಚಿತ್ರ ಮಾಡಿರುವ ಆರೋಪಿ, ಅದನ್ನು ಯುಟ್ಯೂಬ್ ಜಾಲತಾಣದಲ್ಲಿ ಅಪ್ಲೋಡ್ ಮಾಡಿದ್ದಾನೆ. ಆ ವಿಡಿಯೊದಲ್ಲೇ ಸುಧಾಮೂರ್ತಿ ಅವರ ಬಗ್ಗೆ ಕೆಟ್ಟದಾಗಿ ಬಿಂಬಿಸಲಾಗಿದೆ.
ಏಕವಚನದಲ್ಲಿ ಅವಹೇಳನ ಮಾಡಲಾಗಿದೆ ಎಂಬುದಾಗಿ ಕರವೇ ಸದಸ್ಯ ದೂರಿದ್ದಾರೆ’ ಎಂದೂ ತಿಳಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.