ಗುರುವಾರ, 18 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪ್ರತಿಭಟನಕಾರರ ಬಂಧನ: ಬಿಡುಗಡೆಗೆ ಜನವಾದಿ ಮಹಿಳಾ ಸಂಘಟನೆ ಒತ್ತಾಯ

Last Updated 25 ಸೆಪ್ಟೆಂಬರ್ 2020, 21:45 IST
ಅಕ್ಷರ ಗಾತ್ರ

ಬೆಂಗಳೂರು: ಪ್ರತಿಭಟನಾ ನಿರತಮಹಿಳಾ ವಿದ್ಯಾರ್ಥಿ ಕಾರ್ಮಿಕ ಸಂಘಟನೆಗಳ ಕಾರ್ಯಕರ್ತರ ಬಂಧನವನ್ನು ಖಂಡಿಸಿರುವ ಅಖಿಲ ಭಾರತ ಜನವಾದಿ ಮಹಿಳಾ ಸಂಘಟನೆ,ಎಲ್ಲರನ್ನೂ ಬೇಷರತ್ತಾಗಿ ಬಿಡುಗಡೆ ಮಾಡಬೇಕು ಎಂದು ಒತ್ತಾಯಿಸಿದೆ.

‘ಕೋವಿಡ್‌ನಿಂದದೇಶದ‌ ಜನ ಸಂಕಷ್ಟಕ್ಕೆ ಸಿಲುಕಿದ್ದಾರೆ. ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಸಮರೋಪಾದಿಯಲ್ಲಿ ಜನರ ನೆರವಿಗೆ ಧಾವಿಸಬೇಕಿದೆ.ಆದರೆ, ಜನರ ಕಷ್ಟದ ಪರಿಸ್ಥಿತಿಯ ಲಾಭ ಪಡೆದು, ತಮ್ಮ ವರ್ಗ ಬಂಧುಗಳಿಗೆ ಎಲ್ಲ ರೀತಿಯ ಅನುಕೂಲ ಮಾಡಿಕೊಡಲು ಸ್ವತಃ ಸರ್ಕಾರವೇ ಟೊಂಕ ಕಟ್ಟಿ ನಿಂತಿದೆ.ದೇಶದ ಬೆನ್ನೆಲುಬು ಆಗಿರುವ ರೈತರ ಬದುಕಿಗೆ ಬಾರುಕೋಲಿನಿಂದ ಬಾರಿಸಿದಂತೆ ಸುಗ್ರೀವಾಜ್ಞೆಗಳ ಮೂಲಕ ಕಾನೂನುಗಳಿಗೆ ತಿದ್ದುಪಡಿ ತರುತ್ತಿರುವುದು ಖಂಡನೀಯ’ ಎಂದು ಸಂಘಟನೆ ತಿಳಿಸಿದೆ.

‘ದುಡಿಯುವ ಜನರ ಬದುಕನ್ನು ಕಿತ್ತುಕೊಳ್ಳುವುದು‌ ಅಮಾನವೀಯ. ಜನವಿರೋಧಿ ನಡೆಗಳನ್ನು ಖಂಡಿಸಿ, ಪ್ರಜಾಪ್ರಭುತ್ವ ನೆಲೆಯಲ್ಲಿ ಪ್ರತಿಭಟನೆ ನಡೆಸುತ್ತಿದ್ದ ಪ್ರತಿಭಟನಾಕಾರರನ್ನು ಬಂಧಿಸಲಾಗಿದೆ. ಅವರನ್ನು ಕೂಡಲೇ ಬಿಡುಗಡೆ ಮಾಡಬೇಕು. ಸರ್ಕಾರವುಜನವಿರೋಧಿ ಕಾನೂನುಗಳನ್ನು ಹಿಂಪಡೆಯಬೇಕು’ ಎಂದು ಸಂಘಟನೆಯ ಅಧ್ಯಕ್ಷೆ ದೇವಿ ಅವರು ಒತ್ತಾಯಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT