ಬೆಂಗಳೂರು: ದೇವನಹಳ್ಳಿ ತಾಲ್ಲೂಕಿನ ಚನ್ನರಾಯಪಟ್ಟಣದ ಫಲವತ್ತಾದ ಕೃಷಿ ಜಮೀನನ್ನು ಕೈಗಾರಿಕಾ ಪ್ರದೇಶ ಅಭಿವೃದ್ಧಿಗೆ ಸ್ವಾಧೀನ ಪಡಿಸಿಕೊಳ್ಳುವ ಪ್ರಕ್ರಿಯೆಯನ್ನು ತಕ್ಷಣ ಕೈಬಿಡುವಂತೆ ಸಾಹಿತಿಗಳು ಮತ್ತು ಸಾಮಾಜಿಕ ಹೋರಾಟಗಾರರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಪತ್ರ ಬರೆದಿದ್ದಾರೆ.

‘ಚನ್ನರಾಯಪಟ್ಟಣ ಭೂಸ್ವಾಧೀನ ರೈತರು ಹಾಗೂ ಸರ್ಕಾರದ ನಡುವೆ ಸಂಘರ್ಷಕ್ಕೆ ಎಡೆ ಮಾಡಿಕೊಡುತ್ತಿದೆ. ಸರ್ಕಾರ ಏಕೆ ಈ ರೀತಿ ಹಟ ಹಿಡಿದಿದೆ ಎಂಬುದು ನಮಗೆ ಅರ್ಥವಾಗದಾಗಿದೆ’ ಎಂದು ಪತ್ರದಲ್ಲಿ ಕಳವಳ ವ್ಯಕ್ತಪಡಿಸಿದ್ದಾರೆ.

‘ಅಭಿವೃದ್ದಿ ಯೋಜನೆಗಳಿಗೆ ಭೂಮಿ ಬೇಕಾಗುತ್ತದೆ ಎಂಬುದನ್ನು ನಾವೂ ಒಪ್ಪುತ್ತೇವೆ. ಆದರೆ ಅದಕ್ಕೊಂದು ರೀತಿನೀತಿ ಇರಬೇಕಲ್ಲವೇ? ಚನ್ನರಾಯಪಟ್ಟಣದ ಭೂಮಿ ಫಲವತ್ತಾದ ಕೃಷಿ ಭೂಮಿಯಾಗಿದ್ದು, ಸಾವಿರಾರು ಜನ ಅದನ್ನು ನಂಬಿ ಬದುಕುತ್ತಿದ್ದಾರೆ. ಎಲ್ಲಕ್ಕಿಂತ ಮುಖ್ಯವಾಗಿ ಅವರು ತಮ್ಮ ಭೂಮಿಯನ್ನು ಕೈಗಾರಿಕೆಗಳಿಗೆ ಕೊಡಲು ಒಪ್ಪಿಗೆ ಇಲ್ಲ ಎಂದು ಸರ್ಕಾರದ ಗಮನಕ್ಕೆ ತಂದಿದ್ದಾರೆ’ ಎಂದು ಹೇಳಿದ್ದಾರೆ.

‘ರೈತರ ಕೂಗನ್ನು ಕೇಳಿಸಿಕೊಳ್ಳದೆ ಹಿಂದಿನ ಬಿಜೆಪಿ ಸರ್ಕಾರವು ಈ ಭೂಸ್ವಾಧೀನ ಪ್ರಕ್ರಿಯೆ ಆರಂಭಿಸಿತ್ತು. ಆಗ ನಿಮ್ಮ ಪಕ್ಷವೂ ಇದನ್ನು ವಿರೋಧಿಸಿತ್ತು. ನೀವೇ ಖುದ್ದು ಹೋರಾಟ ಸ್ಥಳಕ್ಕೆ ಭೇಟಿ ನೀಡಿ, ರೈತರಿಗೆ ಬೆಂಬಲ ನೀಡಿದ್ದೀರಿ. ಈಗ ಏಕೆ ಆ ಭೂ ಸ್ವಾಧೀನ ಪಡಿಸಿಕೊಳ್ಳಲೇಬೇಕು ಎಂದು ನಿಮ್ಮ ಸರ್ಕಾರ ಪಟ್ಟು ಹಿಡಿದಿದೆ’ ಎಂದು ಪ್ರಶ್ನಿಸಿದ್ದಾರೆ.

‘ರೈತರಿಗೀಗ ಅಂತಿಮ ಅಧಿಸೂಚನೆ ಹೋಗಿದೆ. ರೈತರು ಆತಂಕಗೊಂಡಿದ್ದಾರೆ. ಅವರ ಬೆಂಬಲಕ್ಕೆ ಕರ್ನಾಟಕದ ಸಮಸ್ತ ಸಂಘಟನೆಗಳೂ ನಿಂತಿವೆ. ಜೂನ್ 25ಕ್ಕೆ ದೇವನಹಳ್ಳಿ ಚಲೊಗೆ ಕರೆ ನೀಡಿವೆ. ನೀವು ಜನರ ಭಾವನೆಗಳನ್ನು ಅರ್ಥಮಾಡಿಕೊಳ್ಳಬಲ್ಲವರು. ದಯವಿಟ್ಟು ಕೂಡಲೇ ಮಧ್ಯಪ್ರವೇಶ ಮಾಡಬೇಕು. ಈ ಸಮಸ್ಯೆಯನ್ನು ಬಗೆಹರಿಸಿ ರಾಜ್ಯಕ್ಕೆ ಉತ್ತಮ ಸಂದೇಶ ನೀಡಬೇಕು ಎಂದು ತಮ್ಮಲ್ಲಿ ಮನವಿ ಮಾಡಿಕೊಳ್ಳುತ್ತೇವೆ. ನೀವು ನಮ್ಮನ್ನು ನಿರಾಸೆಗೊಳಿಸುವುದಿಲ್ಲ ಎಂಬ ವಿಶ್ವಾಸ ಇಟ್ಟುಕೊಂಡಿದ್ದೇವೆ’ ಎಂದು ಪತ್ರದಲ್ಲಿ ಕೋರಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.