ಬೆಂಗಳೂರು: ವಾಣಿಜ್ಯ ಬಳಕೆಯ ಗ್ಯಾಸ್ ಸಿಲಿಂಡರ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾದ ಹಿನ್ನೆಲೆಯಲ್ಲಿ ‘ನಮ್ಮ ದೇವೇಗೌಡ ಅಪ್ಪಾಜಿ ಕ್ಯಾಂಟೀನ್‘ ಅನ್ನು ತಾತ್ಕಾಲಿಕವಾಗಿ ಬಂದ್ ಮಾಡಲಾಗಿದೆ.

ಹಸಿದವರಿಗೆ ಅತಿ ಕಡಿಮೆ ಬೆಲೆಯಲ್ಲಿ ಊಟ ಮತ್ತು ತಿಂಡಿ ಒದಗಿಸುವ ಉದ್ದೇಶದಿಂದ 2017ರಿಂದ ದೇವೇಗೌಡ ಅಪ್ಪಾಜಿ ಕ್ಯಾಂಟೀನ್ ನಡೆಸಲಾಗುತ್ತಿತ್ತು.

ಆದರೆ ಇತ್ತೀಚೆಗೆ ವಾಣಿಜ್ಯ ಬಳಕೆಯ ಗ್ಯಾಸ್ ಸಿಲಿಂಡರ್ ಪೂರೈಕೆಯಲ್ಲಿ ಉಂಟಾದ ಸಮಸ್ಯೆಯಿಂದ ಕ್ಯಾಂಟೀನ್ ನಡೆಸುವುದು ಕಷ್ಟವಾಗಿದೆ ಎಂದು ಜೆಡಿಎಸ್ ವಿಧಾನ ಪರಿಷತ್ ಸದಸ್ಯರಾದ ಟಿ.ಎ.ಶರವಣ ಸಾಮಾಜಿಕ ಮಾಧ್ಯಮ ಎಕ್ಸ್ನಲ್ಲಿ ತಿಳಿಸಿದ್ದಾರೆ.

ಗ್ಯಾಸ್ ಸಿಲಿಂಡರ್ ಪೂರೈಕೆ ಯಥಾಸ್ಥಿತಿಗೆ ಮರಳಿದ ನಂತರ ಕ್ಯಾಂಟೀನ್ ಮರುಪ್ರಾರಂಭಿಸಲಾಗುವುದು ಎಂದು ಅವರು ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.