ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸಾರ್ವಜನಿಕ ಉಪಯೋಗದ ಒತ್ತುವರಿ ಸಕ್ರಮ: ಕಾಯ್ದೆಗೆ ತಿದ್ದುಪಡಿ

Last Updated 24 ಸೆಪ್ಟೆಂಬರ್ 2022, 5:31 IST
ಅಕ್ಷರ ಗಾತ್ರ

ಬೆಂಗಳೂರು: ಸಾರ್ವಜನಿಕ ಉಪಯೋಗಕ್ಕಾಗಿ ಸರ್ಕಾರಿ ಭೂಮಿಯನ್ನು ಉಪಯೋಗಿಸಿಕೊಂಡಿದ್ದರೆ ಅದಕ್ಕೆ ಅಭಿವೃದ್ಧಿ ಹಕ್ಕು ಪ್ರಮಾಣಪತ್ರ (ಡಿಆರ್‌ಸಿ) ನೀಡಲು ಕರ್ನಾಟಕ ಪಟ್ಟಣ ಮತ್ತು ಗ್ರಾಮಾಂತರ ಯೋಜನೆಗೆ ರಾಜ್ಯ ಸರ್ಕಾರ ತಿದ್ದುಪಡಿ ತಂದಿದೆ.

ಈ ಕಾಯ್ದೆ ಜಾರಿಯಾಗುವ ಮುನ್ನ ಯಾವುದೇ ರೀತಿಯ ಅಭಿವೃದ್ಧಿ ಆಗಿದ್ದರೆ ಅವರು ಅರ್ಜಿ ಸಲ್ಲಿಸಿ ಪ್ರಮಾಣಪತ್ರ ಪಡೆಯಬಹುದು ಎಂದು ಸೆ.23ರಂದು ತಡರಾತ್ರಿ ಹೊರಡಿಸಿರುವ ಅಧಿಸೂಚನೆಯಲ್ಲಿ ತಿಳಿಸಲಾಗಿದೆ.‌

ಕಾಯ್ದೆ 2021ರ ನವೆಂಬರ್ ನಲ್ಲಿ ಜಾರಿಯಾಗಿದ್ದು, ಇದಕ್ಕೂ ಮೊದಲು ಸರ್ಕಾರಿ ಜಾಗವನ್ನು ಅತಿಕ್ರಮಿಸಿ ಸಾರ್ವಜನಿಕ ಉಪಯೋಗಕ್ಕಾಗಿ ಕಟ್ಟಡ ನಿರ್ಮಿಸಿದ್ದರೂ ಅದಕ್ಕೆ ಸಂಬಂಧ ಪಟ್ಟ ದಾಖಲೆಗಳನ್ನು ಸಲ್ಲಿಸಿ ಅಭಿವೃದ್ಧಿ ಹಕ್ಕು ಪ್ರಮಾಣಪತ್ರ ಪಡೆಯಬಹುದು ಎಂದು ಹೇಳಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT