ಮಂಗಳವಾರ, ಮಾರ್ಚ್ 28, 2023
33 °C

ಡಿಜಿಪಿ ಶರ್ಮಾಗೆ ಗುಂಡೇಟು: ಆಸ್ಪತ್ರೆಗೆ ದಾಖಲು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಬೆಂಗಳೂರು: ಹಿರಿಯ ಐಪಿಎಸ್ ಅಧಿಕಾರಿ ಆರ್.ಪಿ.ಶರ್ಮಾ ಅವರಿಗೆ ಆಕಸ್ಮಿಕವಾಗಿ ಗುಂಡು ತಗುಲಿದ್ದು, ಹೆಬ್ಬಾಳದ ಕೊಲಂಬಿಯಾ ಏಷಿಯಾ ಆಸ್ಪತ್ರೆಗೆ ದಾಖಲಿಸಲಾಗಿದೆ.

ನಗರದ ಕೊತ್ತನೂರಿನಲ್ಲಿರುವ ಅವರ ನಿವಾಸದಲ್ಲಿ ಬುಧವಾರ ಸಂಜೆ ಈ ಘಟನೆ ನಡೆದಿದೆ. ಪೊಲೀಸ್ ಗೃಹಮಂಡಳಿ ನಿರ್ದೇಶಕರೂ ಆಗಿರುವ ಶರ್ಮಾ ಅವರ ಎದೆ ಹಾಗೂ ಕುತ್ತಿಗೆಗೆ ಗುಂಡೇಟು ತಗುಲಿದೆ. ಆತ್ಮಹತ್ಯೆಗೆ ಯತ್ನಿಸಿರುವಂತೆ ಮೇಲ್ನೋಟಕ್ಕೆ ಕಾಣಿಸುತ್ತಿದೆ.

'ಇವರಿಗೆ ಇಬ್ಬರು ಮಕ್ಕಳಿದ್ದಾರೆ. ಆದರೆ, ಮನೆಯಲ್ಲಿ ಯಾರೂ ಇಲ್ಲದ ವೇಳೆಯಲ್ಲಿ ಈ ಘಟನೆ ನಡೆದಿದೆ. ರಿವಾಲ್ವರ್ ಸ್ವಚ್ಛಗೊಳಿಸುತ್ತಿದ್ದಾಗ ಆಕಸ್ಮಿಕವಾಗಿ ಗುಂಡು ಹಾರಿರುವ ಸಾಧ್ಯತೆ ಇದೆ' ಎಂದು ಇಲಾಖೆ ಅಧಿಕಾರಿಯೊಬ್ಬರು ಮಾಹಿತಿ ನೀಡಿದರು.

ಈ ಬಗ್ಗೆ ಪ್ರತಿಕ್ರಿಯಿಸಿದ ಈಶಾನ್ಯ ವಿಭಾಗದ ಡಿಸಿಪಿ ಭೀಮಾಶಂಕರ್ ಗುಳೇದ್, 'ಇದೊಂದು ಆಕಸ್ಮಿಕ ಘಟನೆ. ಶರ್ಮಾ ಅವರ ಪ್ರಾಣಕ್ಕೆ ಯಾವುದೇ ತೊಂದರೆಯಿಲ್ಲ' ಎಂದಿದ್ದಾರೆ.

ಕೊಲಂಬಿಯಾ ಏಷಿಯಾ ಆಸ್ಪತ್ರೆಗೆ ಭೇಟಿ ನೀಡಿದ ನಗರ ಪೊಲೀಸ್ ಕಮಿಷನರ್ ಕಮಲ್ ಪಂತ್, ಶರ್ಮಾ ಆರೋಗ್ಯ ವಿಚಾರಿಸಿದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.