ಶನಿವಾರ, ಆಗಸ್ಟ್ 20, 2022
22 °C

ಗುತ್ತಿಗೆ ಸಿಬ್ಬಂದಿಗೆ ಗೌರವಧನ ಬಿಡುಗಡೆಗೆ ಒತ್ತಾಯಿಸಿ ಧರಣಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಬೆಂಗಳೂರು: ಆಸ್ಪತ್ರೆಗಳಲ್ಲಿ ಕೊರೊನಾ ಸೇವೆಯಲ್ಲಿ ತೊಡಗಿರುವ ಗುತ್ತಿಗೆ ಸಿಬ್ಬಂದಿಗೆ ಈವರೆಗೆ ಗೌರವಧನ ಬಿಡುಗಡೆ ಮಾಡದೆ, ಸರ್ಕಾರ ನಿರ್ಲಕ್ಷ್ಯ ಧೋರಣೆ ಮಾಡಿದೆ ಎಂದು ಖಂಡಿಸಿ ವಿಧಾನ ಪರಿಷತ್ ಸದಸ್ಯರಾದ ಜಿ.ರಘು ಆಚಾರ್ ಹಾಗೂ ಬಿ.ಕೆ.ಹರಿಪ್ರಸಾದ್ ಅವರು ವಿಧಾನಸೌಧದ ಬಳಿಯ ಗಾಂಧಿ ಪ್ರತಿಮೆ ಮುಂಭಾಗ ಶನಿವಾರ ಧರಣಿ ನಡೆಸಿದರು.

ಬಳಿಕ ಮಾತನಾಡಿದ ಜಿ.ರಘು ಆಚಾರ್, 'ಜುಲೈ ಹಾಗೂ ಆಗಸ್ಟ್ ನಲ್ಲಿ ಚಿತ್ರದುರ್ಗ ಜಿಲ್ಲೆಯ ಕೋವಿಡ್ ಆಸ್ಪತ್ರೆಗಳಿಗೆ ಎರಡು ಬಾರಿ ಭೇಟಿ ನೀಡಿದೆ. ಅಲ್ಲಿ ಕೊರೊನಾ ಯೋಧರಾಗಿ ಕಾರ್ಯನಿರ್ವಹಿಸುತ್ತಿರುವ ಗುತ್ತಿಗೆ ಸಿಬ್ಬಂದಿ ನಾಲ್ಕು ತಿಂಗಳಿನಿಂದ ವೇತನವಿಲ್ಲದೆ ಸೇವೆಯಲ್ಲಿ ತೊಡಗಿರುವ ವಿಚಾರ ತಿಳಿಯಿತು' ಎಂದು ಬೇಸರ ವ್ಯಕ್ತಪಡಿಸಿದರು.

'ಈ ಬಗ್ಗೆ ಪರಿಶೀಲಿಸಿದಾಗ ರಾಜ್ಯದ ವಿವಿಧ ಜಿಲ್ಲೆಗಳಲ್ಲೂ ಇದೇ ಸ್ಥಿತಿ ಇರುವುದು ಕಂಡುಬಂತು. ಈ ಬಗ್ಗೆ ಸರ್ಕಾರಕ್ಕೆ ಮನವಿ ಸಲ್ಲಿಸಿ, 20 ದಿನಗಳು ಕಳೆದರೂ ಯಾವುದೇ ಕ್ರಮ ಕೈಗೊಳ್ಳದಿರುವುದು ಬೇಸರದ ಸಂಗತಿ. ಕೂಡಲೇ ಅವರಿಗೆ ವೇತನ ಬಿಡುಗಡೆ ಮಾಡದಿದ್ದರೆ, ಮುಂದಿನ ವಿಧಾನಪರಿಷತ್ ಅಧಿವೇಶನದಲ್ಲಿ ಸಭಾಪತಿ ಪೀಠದ ಎದುರು ಧರಣಿ ನಡೆಸುತ್ತೇವೆ' ಎಂದು ಎಚ್ಚರಿಸಿದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು