ಬೆಂಗಳೂರು: ಧರ್ಮಸ್ಥಳ ಸುತ್ತಮುತ್ತ ನೂರಾರು ಶವಗಳನ್ನು ಸಾಮೂಹಿಕ ಹೂಳಲಾಗಿದೆ ಎನ್ನಲಾದ ಆರೋಪಗಳಿಗೆ ಸಂಬಂಧಿಸಿ ಪೊಲೀಸ್ ಠಾಣೆಯಲ್ಲಿ ದಾಖಲಾಗಿರುವ ಎಫ್ಐಆರ್ಗೆ ಸಂಬಂಧಿಸಿದ ಮುಂದಿನ ಎಲ್ಲ ಪ್ರಕ್ರಿಯೆಗೆ ನೀಡಿದ್ದ ತಡೆಯಾಜ್ಞೆಯನ್ನು ಹೈಕೋರ್ಟ್ ತೆರವುಗೊಳಿಸಿದೆ.

ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ದಾಖಲಾಗಿರುವ ಸಾಮೂಹಿಕ ಅಂತ್ಯಕ್ರಿಯೆ ಪ್ರಕರಣಕ್ಕೆ ಸಂಬಂಧಿಸಿದ ಎಫ್ಐಆರ್ (ಎಫ್ಐಆರ್ ಸಂಖ್ಯೆ 39/2025), ವಿಚಾರಣೆಗೆ ಹಾಜರಾಗಲು ಪೊಲೀಸರು ನೀಡಿರುವ ನೋಟಿಸ್ ಹಾಗೂ ಬೆಳ್ತಂಗಡಿ ನ್ಯಾಯಾಲಯದಲ್ಲಿ ನಡೆಯುತ್ತಿರುವ ವಿಚಾರಣೆ ರದ್ದು ಕೋರಿ ಗಿರೀಶ್ ಮಟ್ಟಣ್ಣವರ್ ಸೇರಿದಂತೆ ನಾಲ್ವರು ಸಲ್ಲಿಸಿದ್ದ ರಿಟ್ ಅರ್ಜಿಯನ್ನು ನ್ಯಾಯಮೂರ್ತಿ ಮೊಹಮ್ಮದ್ ನವಾಜ್ ಅವರಿದ್ದ ಏಕಸದಸ್ಯ ನ್ಯಾಯಪೀಠ ಬುಧವಾರ ವಿಚಾರಣೆ ನಡೆಸಿತು.

ಸರ್ಕಾರದ ಪರ ವಕೀಲರ ವಾದ ಆಲಿಸಿದ ನ್ಯಾಯಪೀಠ, ಎಫ್ಐಆರ್ಗೆ ತಡೆ ನೀಡಿ ಅಕ್ಟೋಬರ್ 30ರಂದು ಹೊರಡಿಸಿದ್ದ ಮಧ್ಯಂತರ ಆದೇಶವನ್ನು ತೆರವುಗೊಳಿಸಿತು. ಅರ್ಜಿಯನ್ನು ಮೆರಿಟ್ ಆಧಾರದಲ್ಲಿ ವಿಚಾರಣೆ ನಡೆಸುವುದಾಗಿ ತಿಳಿಸಿ, ವಿಚಾರಣೆಯನ್ನು ನವೆಂಬರ್ 28ಕ್ಕೆ ಮುಂದೂಡಿತು. ರಾಜ್ಯ ಸರ್ಕಾರದ ಪರ ರಾಜ್ಯ ಹೆಚ್ಚುವರಿ ಪ್ರಾಸಿಕ್ಯೂಟರ್ ಬಿ.ಎನ್. ಜಗದೀಶ್ ವಾದ ಮಂಡಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.