ಸರ್ಕಾರಿ ಆಸ್ಪತ್ರೆಗೆ ಡಿಎಚ್‌ಒ ದಿಢೀರ್ ಭೇಟಿ

ದಾಬಸ್ ಪೇಟೆ: ಇಲ್ಲಿನ ಸರ್ಕಾರಿ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಜಿಲ್ಲಾ ಆರೋಗ್ಯಾಧಿಕಾರಿ ಡಾ. ಯೋಗೀಶ್ ಗೌಡ ದಿಢೀರ್ ಭೇಟಿ ನೀಡಿ ಪರಿಶೀಲಿಸಿದರು.
ಕೆಲವು ಸಮಸ್ಯೆಗಳನ್ನು ಕಂಡು ಗರಂ ಆದರು. ಸಂಬಂಧಿಸಿದವರನ್ನು ತರಾಟೆಗೆ ತೆಗೆದುಕೊಂಡರು. ‘ಕೆಲ ವ್ಯತ್ಯಾಸಗಳು ಇರುವುದು ಕಂಡು ಬಂದಿದೆ. ಅದನ್ನು ಸರಿ ಮಾಡಿಕೊಳ್ಳುವಂತೆ ಕಟ್ಟುನಿಟ್ಟಾಗಿ ತಿಳಿಸಲಾಗಿದೆ’ ಎಂದು ತಿಳಿಸಿದರು.
ಸಮವಸ್ತ್ರ ಧರಿಸದ ನರ್ಸ್‌ಗಳನ್ನು ತರಾಟೆಗೆ ತೆಗೆದುಕೊಂಡರು. ಗೈರುಹಾಜರಾದ ಡಿ ಗ್ರೂಪ್ ನೌಕರರ ವಿರುದ್ಧ ಶಿಸ್ತುಕ್ರಮ ಕೈಗೊಂಡಿರುವುದಾಗಿ ಹೇಳಿದರು. ‘ವೈದ್ಯರ ಕೊರತೆ ನೀಗಿಸಲು ಶಿವಗಂಗೆ, ನರಸೀಪುರ, ಎಲೆಕ್ಯಾತನಹಳ್ಳಿಯಲ್ಲಿನ ವೈದ್ಯರನ್ನು ತಾತ್ಕಾಲಿಕವಾಗಿ ನಿಯೋಜಿಸಲಾಗಿದೆ’ ಎಂದು ಅವರು ಹೇಳಿದರು.
ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.