ಬೆಂಗಳೂರು: ‘ರಾಷ್ಟ್ರೀಯ ಆರೋಗ್ಯ ಮಿಷನ್ (ಎನ್ಎಚ್ಎಂ) ಯೋಜನೆ ಯಡಿ ಮಧುಮೇಹ ಕಾಯಿಲೆಗೆ ಇನ್ಸುಲಿನ್ ಔಷಧ ಕೊಡಿಸುವ ಚಿಂತನೆ ಇದೆ’ ಎಂದು ಉಪಮುಖ್ಯಮಂತ್ರಿ ಸಿ.ಎನ್.ಅಶ್ವತ್ಥನಾರಾಯಣ ತಿಳಿಸಿದರು.

ಟೈಪ್–1 ಡಯಾಬಿಟಿಸ್ ಫೌಂಡೇ ಷನ್ ಆಫ್ ಇಂಡಿಯಾ ವತಿಯಿಂದ ಭಾನುವಾರ ಆಯೋಜಿಸಿದ್ದ ಪ್ರತಿಷ್ಠಾನದ ಉದ್ಘಾಟನಾ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

‘ಮಧುಮೇಹ ಕುರಿತಂತೆ ಪರಿಣಾಮಕಾರಿ ಸಮೀಕ್ಷೆಗಳಿಂದ ಮಾಹಿತಿ ಸಂಗ್ರಹಿಸಿ, ಡಿಜಿಟಲೀಕರಣಗೊಳಿಸಬೇಕು. ಆಯುಷ್ಮಾನ್ ಭಾರತ್-ಆರೋಗ್ಯ ಕರ್ನಾಟಕ ಯೋಜನೆಯ ವ್ಯಾಪ್ತಿಯಲ್ಲಿ ಇದು ಸೇರಿರದ ಕಾರಣ ಆರೋಗ್ಯ ಮಿಷನ್ನಡಿ ಸೇರಿಸುವ ಬಗ್ಗೆ ಶೀಘ್ರವೇ ಕ್ರಮ ಕೈಗೊಳ್ಳಲಾಗುವುದು’ ಎಂದರು.

‘ಮಧುಮೇಹ ಸದ್ದಿಲ್ಲದೆ ಕೊಲ್ಲುವ ಕಾಯಿಲೆ.ವಯಸ್ಕರನ್ನು ಮಾತ್ರವಲ್ಲದೆ ಮಕ್ಕಳಲ್ಲೂ ಈ ಸಮಸ್ಯೆ ಕಾಡುತ್ತಿರುವುದು ಆತಂಕಕಾರಿ. ಈ ಬಗ್ಗೆ ಹೆಚ್ಚು ಸಂಶೋಧನೆಗಳು ನಡೆಯಬೇಕು. ಭ್ರಷ್ಟಾಚಾರಕ್ಕಿಂತ ಅನಾರೋಗ್ಯ ದೊಡ್ಡ ಪಿಡುಗು. ಆರೋಗ್ಯ ಸಮಸ್ಯೆಗಳನ್ನು ನಿವಾರಿಸಲು ಪ್ರಾಧಿಕಾರ ರಚಿಸುವ ಅಗತ್ಯವಿದೆ’ ಎಂದರು.

ಪ್ರತಿಷ್ಠಾನದ ಸಂಸ್ಥಾಪನಾ ಮುಖ್ಯಸ್ಥ ಕೆ.ಎಸ್.ನವೀನ್,‘ವಿಶ್ವದಲ್ಲೇ ಅತಿ ಹೆಚ್ಚು ಮಧುಮೇಹ ಕಾಯಿಲೆ ಉಳ್ಳವರ ಪಟ್ಟಿಯಲ್ಲಿ ಭಾರತ ಎರಡನೇ ಸ್ಥಾನದಲ್ಲಿದೆ. ವರದಿಯೊಂದರ ಪ್ರಕಾರ ರಾಜ್ಯದ 3ಲಕ್ಷಕ್ಕೂ ಅಧಿಕ ಮಕ್ಕಳಲ್ಲಿ ಮಧುಮೇಹ ಪತ್ತೆಯಾಗಿದೆ. ಇದರ ಚಿಕಿತ್ಸಾ ವೆಚ್ಚ ದುಬಾರಿಯಾಗಿದ್ದು, ಬಡವರಿಗೆ ಹೊರೆಯಾಗುತ್ತಿದೆ. ಚಿಕಿತ್ಸೆಗೆ ಸರ್ಕಾರದಿಂದಲೇ ನೆರವು ನೀಡಬೇಕು’ ಎಂದು ಒತ್ತಾಯಿಸಿದರು.

‘ಟೈಪ್- 1 ಮಧುಮೇಹ ಸಮಸ್ಯೆಗಳನ್ನು ಸರ್ಕಾರಗಳ ಗಮನಕ್ಕೆ ತಂದು, ಶಾಶ್ವತ ಪರಿಹಾರ ಕಂಡುಕೊಳ್ಳುವ ಉದ್ದೇಶದಿಂದ ದೇಶದ ಉದ್ದಗಲಕ್ಕೂ ಇರುವ ಡಯಾಬಿಟಿಸ್ ಕೇಂದ್ರಗಳನ್ನು ಒಗ್ಗೂಡಿಸಿ ಈ ಪ್ರತಿಷ್ಠಾನ ಸ್ಥಾಪಿಸಲಾಗಿದೆ’ ಎಂದು ಮಾಹಿತಿ ನೀಡಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.