ರಾಜರಾಜೇಶ್ವರಿ ನಗರ: ನಾಗರಿಕರಿಗೆ ಗುಣಮಟ್ಟದ ಅಗತ್ಯ ಸೌಲಭ್ಯವುಳ್ಳ ಸುಸಜ್ಜಿತ 250 ಹಾಸಿಗೆಯುಳ್ಳ ಆಸ್ಪತ್ರೆಯನ್ನು ನಿರ್ಮಾಣ ಮಾಡಲಾಗುತ್ತದೆ ಎಂದು ಆರೋಗ್ಯ ಮತ್ತು ಕಲ್ಯಾಣ ಸಚಿವ ದಿನೇಶ್ ಗುಂಡೂರಾವ್ ಹೇಳಿದರು.

ಯಶವಂತಪುರ ಕ್ಷೇತ್ರದ ಉಲ್ಲಾಳುವಿನಲ್ಲಿ ₹209 ಕೋಟಿ ವೆಚ್ಚದಲ್ಲಿ ನಿರ್ಮಾಣವಾಗುತ್ತಿರುವ 250 ಹಾಸಿಗೆಯುಳ್ಳ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ಕಾಮಗಾರಿಯನ್ನು ಪರಿಶೀಲಿಸಿ ಅವರು ಮಾತನಾಡಿದರು.

ಭರತ್ ನಗರದಲ್ಲಿ ಡಯಾಲಿಸಿಸ್ ಸೆಂಟರ್ ವೀಕ್ಷಿಸಿ, ಉಚಿತ ಆಂಬುಲೆನ್ಸ್ ವಾಹನವನ್ನು ಜನಾರ್ಪಣೆ ಮಾಡಿದ ಅವರು, ಮಧುಮೇಹ, ರಕ್ತದೊತ್ತಡ ರೋಗಿಗಳಿಗೆ ಅನುಕೂಲ ಮಾಡಿಕೊಡಲು ಅಗತ್ಯ ಕಂಡುಬಂದರೆ ಇನ್ನು ಹೆಚ್ಚಿನ ಡಯಾಲಿಸಿಸ್ ಯಂತ್ರಗಳನ್ನು ನೀಡಲಾಗುವುದು ಎಂದರು.

ಕೆಂಗೇರಿ ಉಪನಗರದಲ್ಲಿ ತಾಯಿ ಮತ್ತು ಮಕ್ಕಳ ಆಸ್ಪತ್ರೆಯ ಕಟ್ಟಡವನ್ನು ₹30 ಕೋಟಿ ವೆಚ್ಚದಲ್ಲಿ ನಿರ್ಮಿಸಲು ನೀಲ ನಕ್ಷೆ ತಯಾರಾಗಿದೆ. ಶೀಘ್ರದಲ್ಲಿಯೇ ₹11ಕೋಟಿ ವೆಚ್ಚದಲ್ಲಿ ಕ್ಷೇತ್ರದ ಮೂರು ಕಡೆ ಡಯಾಲಿಸಿಸ್ ಸೆಂಟರ್ ಪ್ರಾರಂಭಿಸಲಾಗುವುದು ಎಂದರು.

ಶಾಸಕ ಎಸ್.ಟಿ. ಸೋಮಶೇಖರ್ ಮಾತನಾಡಿ, ಒಂದೇ ಕಟ್ಟಡದಲ್ಲಿ ನುರಿತ ವೈದ್ಯರಿಂದ ಎಲ್ಲಾ ಚಿಕಿತ್ಸೆಯನ್ನು ದೊರಕಿಸಿಕೊಡಲಾಗುತ್ತದೆ ಎಂದು ಹೇಳಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.