ಭಾನುವಾರ, 5 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ದಿನೇಶ್ ಅಮೀನ್ ಮಟ್ಟು ಸೇರಿ ನಾಲ್ವರಿಗೆ ಪ್ರಶಸ್ತಿ

Published 11 ಜುಲೈ 2023, 14:42 IST
Last Updated 11 ಜುಲೈ 2023, 14:42 IST
ಅಕ್ಷರ ಗಾತ್ರ

ಬೆಂಗಳೂರು: ಕರ್ನಾಟಕ ರಾಜ್ಯ ಎಸ್ಸಿ, ಎಸ್ಟಿ ಪತ್ರಿಕಾ ಸಂಪಾದಕರ ಸಂಘ ನೀಡುವ 2022–23ನೇ ಸಾಲಿನ ‘ಬಿ.ರಾಚಯ್ಯ ದತ್ತಿನಿಧಿ ವಾರ್ಷಿಕ ಪ್ರಶಸ್ತಿ’ಗೆ ಪತ್ರಕರ್ತ ದಿನೇಶ್ ಅಮೀನ್ ಮಟ್ಟು ಅವರನ್ನು ಆಯ್ಕೆ ಮಾಡಲಾಗಿದೆ. 

ಈ ಪ್ರಶಸ್ತಿಯು ₹10 ಸಾವಿರ ನಗದು ಒಳಗೊಂಡಿದೆ. ಸುದ್ದಿ ಮಾಧ್ಯಮ‌ ಕ್ಷೇತ್ರದಲ್ಲಿ ಗಣನೀಯ ಸೇವೆ ಸಲ್ಲಿಸಿದ ಪರಿಶಿಷ್ಟ ಜಾತಿ (ಎಸ್‌ಸಿ) ಮತ್ತು ಪರಿಶಿಷ್ಟ ಪಂಗಡದ (ಎಸ್‌ಟಿ) ಮೂವರು ಹಿರಿಯ ಸಂಪಾದಕರಿಗೆ ನೀಡುವ ‘ವಾರ್ಷಿಕ ಪ್ರಶಸ್ತಿ’ಯನ್ನೂ ಘೋಷಿಸಿದ್ದು, ಕೋಲಾರದ ಸಿ. ಮುನಿಯಪ್ಪ, ಚಿತ್ರದುರ್ಗದ ಮೈಲಾರಪ್ಪ ಮತ್ತು ಬೀದರ್‌ನ ಮಾಳಪ್ಪ ಅಡಸಾರೆ ಆಯ್ಕೆಯಾಗಿದ್ದಾರೆ. ಈ ಪ್ರಶಸ್ತಿಯು ತಲಾ ₹ 5 ಸಾವಿರ ನಗದು ಒಳಗೊಂಡಿದೆ. 

ಇದೇ ತಿಂಗಳ ಕೊನೆಯ ವಾರ ಬೆಂಗಳೂರಿನಲ್ಲಿ ನಡೆಯಲಿರುವ ಅಂಬೇಡ್ಕರ್ ಜಯಂತಿ ಕಾರ್ಯಕ್ರಮದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುವುದು ಎಂದು ಸಂಘದ ಅಧ್ಯಕ್ಷ ಚೆಲುವರಾಜು ಮತ್ತು ಪ್ರಧಾನ ಕಾರ್ಯದರ್ಶಿ ಸೋಮಶೇಖರ ಕೆರಗೋಡು ತಿಳಿಸಿದ್ದಾರೆ.

ಮಾಳಪ್ಪ ಅಡಸಾರೆ
ಮಾಳಪ್ಪ ಅಡಸಾರೆ
ಸಿ. ಮುನಿಯಪ್ಪ
ಸಿ. ಮುನಿಯಪ್ಪ
ಮೈಲಾರಪ್ಪ
ಮೈಲಾರಪ್ಪ

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT