ಶುಕ್ರವಾರ, ಆಗಸ್ಟ್ 19, 2022
25 °C
ಆದಾಯ ತೆರಿಗೆ ಇಲಾಖೆ ಕರ್ನಾಟಕ ಮತ್ತು ಗೋವಾ ವಲಯ

ಪ್ರಧಾನ ಮುಖ್ಯ ಆಯುಕ್ತರಾಗಿ ದಿನೇಶ್‌ ಚಂದ್ರ ಪಟ್ವಾರಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಬೆಂಗಳೂರು: ಆದಾಯ ತೆರಿಗೆ ಇಲಾಖೆಯ ಕರ್ನಾಟಕ ಮತ್ತು ಗೋವಾ ವಲಯದ ಪ್ರಧಾನ ಮುಖ್ಯ ಆಯುಕ್ತರಾಗಿ ಭಾರತೀಯ ಕಂದಾಯ ಸೇವೆಯ 1986ನೇ ಬ್ಯಾಚ್‌ನ ಅಧಿಕಾರಿ ದಿನೇಶ್‌ ಚಂದ್ರ ಪಟ್ವಾರಿ ಬುಧವಾರ ಅಧಿಕಾರ ಸ್ವೀಕರಿಸಿದರು.

ಈ ಮೊದಲು ಅವರು ಇಲಾಖೆಯ ತಮಿಳುನಾಡು ಮತ್ತು ಪುದುಚೇರಿ ವಲಯದ ತನಿಖಾ ವಿಭಾಗದ ಮಹಾನಿರ್ದೇಶಕರಾಗಿ ಕಾರ್ಯನಿರ್ವಹಿಸುತ್ತಿದ್ದರು. ಕರ್ನಾಟಕ ಮತ್ತು ಗೋವಾ ವಲಯದ ಪ್ರಧಾನ ಮುಖ್ಯ ಆಯುಕ್ತರ ಹುದ್ದೆಯ ಜತೆ ಹೆಚ್ಚುವಾರಿಯಾಗಿ ಹಿಂದಿನ ಹುದ್ದೆಯನ್ನೂ ಅವರಿಗೆ ನೀಡಲಾಗಿದೆ ಎಂದು ಆದಾಯ ತೆರಿಗೆ ಇಲಾಖೆಯ ಪ್ರಕಟಣೆ ತಿಳಿಸಿದೆ.

ದಿನೇಶ್‌ ಚಂದ್ರ ಪಟ್ವಾರಿ ಅವರು ಈ ಹಿಂದೆ ರಾಜ್‌ಕೋಟ್‌, ಬರೋಡಾ, ಅಹ್ಮದಾಬಾದ್‌, ಬರೋಡಾ ಮತ್ತು ಜೈಪುರಗಳಲ್ಲಿ ಆದಾಯ ತೆರಿಗೆ ಇಲಾಖೆಯ ವಿವಿಧ ಹುದ್ದೆಗಳಲ್ಲಿ ಕಾರ್ಯನಿರ್ವಹಿಸಿದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.